ರಾಯಚೂರು: ವಿಧಾನಪರಿಷತ್ ಈಶಾನ್ಯ ಶಿಕ್ಷಣ ಕ್ಷೇತ್ರದ ಚುನಾವಣೆ ಪ್ರಚಾರ ಸಭೆಯಲ್ಲಿ ಸರ್ಕಾರಿ ಸೇವೆಯಲ್ಲಿರುವವರನ್ನು ಬಳಸಿಕೊಂಡು ಚುನಾವಣೆ ಪ್ರಚಾರ ಮಾಡಿರುವ ಕಾಂಗ್ರೆಸ್ ಅಭ್ಯರ್ಥಿಯನ್ನ ಅನರ್ಹಗೊಳಿಸುವಂತೆ ಜೆಡಿಎಸ್ ಲ್ಲಾ ಚುನಾವಣೆ ಅಧಿಕಾರಿಗಳಿಗೆ ದೂರು ನೀಡಿದೆ.
ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿರುವ ಶರಣಪ್ಪ ಮಟ್ಟೂರು ಇತ್ತೀಚೆಗೆ ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಚುನಾವಣೆ ಪ್ರಚಾರ ಮಾಡಿದ್ದಾರೆ. ಈ ವೇಳೆ ಸರ್ಕಾರಿ ಸೇವೆಯಲ್ಲಿರುವ ಚಂದ್ರಶೇಖರ ಹಿರೇಮಠರನ್ನ ಪ್ರಚಾರ ಕಾರ್ಯಕ್ರಮದಲ್ಲಿ ಬಳಸಿಕೊಂಡು, ಮತದಾರ ಮೇಲೆ ಪ್ರಭಾವ ಬೀರುವಂತೆ ಮತ ಪ್ರಚಾರ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಚುನಾವಣೆ ಪ್ರಚಾರದಲ್ಲಿ ಗುರುತಿಸಿಕೊಂಡಿರುವ ಸರ್ಕಾರಿ ನೌಕರ ಚಂದ್ರಶೇಖರ ಹಿರೇಮಠ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ಹಾಗೂ ಪ್ರಚಾರದಲ್ಲಿ ಸರ್ಕಾರಿ ನೌಕರನನ್ನು ಬಳಸಿಕೊಂಡು ಮತದಾರರ ಮೇಲೆ ಪ್ರಭಾವ ಬೀರಿರುವ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟರು ಅವರನ್ನು ಚುನಾವಣೆಯಿಂದಲೇ ಅನರ್ಹಗೊಳಿಸಬೇಕೆಂದು ಜಿಲ್ಲಾ ಚುನಾವಣೆ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.