ರಾಯಚೂರು: ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪೆಟ್ರೋಲ್ ಬಂಕ್ ಅಣಕು ಭಾವಚಿತ್ರದ ಮುಂದೆ ಶ್ರಾದ್ಧ ಮಾಡುವ ಮೂಲಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಮುಖಂಡರು ವಿನೂತನವಾಗಿ ಪ್ರತಿಭಟಿಸಿದರು.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಿದೆ. ಆದರೆ ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್ ಏರಿಸುವ ಮೂಲಕ ಜನಸಾಮಾನ್ಯರ ಮೇಲೆ ಹೊರೆ ಹೇರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.