ರಾಯಚೂರು/ಲಿಂಗಸುಗೂರು: ಲಿಂಗಸುಗೂರು ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತಿ ಕೇಂದ್ರ ಸ್ಥಳಗಳಲ್ಲಿ ಡಿಜಿಟಲ್ ವೇದಿಕೆಗಳ ಮೂಲಕ ಡಿ.ಕೆ.ಶಿವಕುಮಾರ್ ಪದಗ್ರಹಣ ಕಾರ್ಯಕ್ರಮವನ್ನು ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವೀಕ್ಷಿಸಿದರು.
ಲಿಂಗಸುಗೂರು ಗಡಿಯಾರ ವೃತ್ತದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಕೆಪಿಸಿಸಿ ವೀಕ್ಷಕ ಜಿಲ್ಲಾ ಉಸ್ತುವಾರಿ ದೇವೇಂದ್ರಪ್ಪ ಮರ್ತೂರ ಉದ್ಘಾಟಿಸಿದರು. ಡಿಕೆಶಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಕಾರ್ಯಕರ್ತರು ಪಟಾಕಿ ಸಿಡಿಸಿ ಖುಷಿಪಟ್ಟರು.