ರಾಯಚೂರು: ನಾರಾಯಣಪುರ ಜಲಾಶಯದಲ್ಲಿ ನೀರಿನ ಒಳಹರಿವು ಹೆಚ್ಚಾಗಿದ್ದು, ಕೃಷ್ಣಾ ನದಿ ತೀರದ ಪ್ರದೇಶಗಳಿಗೆ ಮತ್ತೆ ಪ್ರವಾಹ ಭೀತಿ ಶುರುವಾಗಿದೆ.
ನಾರಾಯಣಪುರ ಜಲಾಶಯದಲ್ಲಿ 85 ಸಾವಿರ ಕ್ಯೂಸೆಕ್ಸ್ ಒಳಹರಿವುಯಿದೆ. ಜಲಾಶಯದ ಗೇಟ್ಗಳ ಮೂಲಕ 93 ಸಾವಿರ ಕ್ಯೂಸೆಕ್ಸ್ ನೀರನ್ನು ಕೃಷ್ಣಾ ನದಿಗೆ ಹರಿದು ಬೀಡಲಾಗುತ್ತಿದೆ. ಕೃಷಾ ನಾಲೆಗಳಿಗೆ 6,500 ಕ್ಯೂಸೆಕ್ಸ್ ನೀರನ್ನು ಹರಿಸಲಾಗುತ್ತಿದೆ.
ಇದರಿಂದ ಜಿಲ್ಲೆಯ ಲಿಂಗಸೂಗೂರು, ದೇವದುರ್ಗ, ರಾಯಚೂರು ತಾಲೂಕಿಗೆ ಮತ್ತೆ ಪ್ರವಾಹ ಭೀತಿ ಶುರುವಾಗಿದೆ.
ಸದ್ಯ ಹರಿದು ಬಿಡಲಾಗಿರುವ ನೀರಿನಿಂದ ಯಾವುದೇ ತೊಂದರೆಯಿಲ್ಲ. ಒಂದು ವೇಳೆ ಜಲಾಶಯಕ್ಕೆ ಒಳಹರಿವು ಹೆಚ್ಚಳಗೊಂಡರೆ ಜಲಾಶಯದಿಂದ ಹೆಚ್ಚುವರಿ ನೀರು ಹರಿಬಿಡುವುದರಿಂದ ನದಿ ತೀರದ ಪ್ರದೇಶಗಳಿಗೆ ಪ್ರವಾಹ ಭೀತಿ ಶುರುವಾಗಲಿದೆ.