ರಾಯಚೂರು: ಎರಡು ವರ್ಷಗಳ ಹಿಂದೆ ಜಿಲ್ಲೆಯ ಮಸ್ಕಿ ತಾಲೂಕಿನ ಅಡವಿಬಾವಿ ತಾಂಡ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಹೊರಬಿದ್ದಿದೆ.
ಪಿಡಿಒ ಹನುಮಂತರಾಯ ಎಂಬುವರಿಗೆ 2 ವರ್ಷ ಶಿಕ್ಷೆ ಹಾಗೂ ಒಂದು ಸಾವಿರ ರೂ. ದಂಡ ವಿಧಿಸಿ ಲಿಂಗಸುಗೂರಿನ ಹಿರಿಯ ಸಿವಿಲ್ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಲಕ್ಷ್ಮಿಕಾಂತ್ ಜೆ. ಮಿಸ್ಕಿನ್ ಆದೇಶ ಹೊರಡಿಸಿದ್ದಾರೆ.
2016ರ ಮೇ 27ರಂದು ಕೆಇಬಿ ಇಲಾಖೆಯಿಂದ ಅಡವಿಬಾವಿ ತಾಂಡದಲ್ಲಿ ಕಾರ್ಮಿಕ ಶಿವಪ್ಪ ಕೊಳವೆ ಬಾವಿಗೆ ಪೈಪ್ ಇಳಿಸುವಾಗ ವಿದ್ಯುತ್ ತಂತಿ ತಗುಲಿದೆ. ಮುಂಜಾಗ್ರತ ಕ್ರಮವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕಾಗಿದ್ದ ಪಿಡಿಒ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮಸ್ಕಿ ಪಿಎಸ್ಐ ಸುಶೀಲ ಕುಮಾರ್ ಆರೋಪ ಪಟ್ಟಿ ಸಲ್ಲಿಸಿದರು. ಸರಕಾರದ ಪರವಾಗಿ ಸರಕಾರಿ ಸಹಾಯಕ ಅಭಿಯೋಜಕ ವಸಂತ ವಾದ ಮಂಡಿಸಿದ್ದರು.