ರಾಯಚೂರು: ರಾಯಚೂರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕಾರ್ಮಿಕ, ಸಕ್ಕರೆ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ಗರಂ ಆದ ಪ್ರಸಂಗ ನಡೆಯಿತು.
ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದ ಸಚಿವರು, ಸಭೆಯಲ್ಲಿ ಪಾಲ್ಗೊಳ್ಳಬೇಕಿದ್ದ ಜಿಲ್ಲಾಧಿಕಾರಿ, ಜಿ.ಪಂ. ಸಿಇಒ ಗೈರು ಹಾಜರಿದಿದ್ದನ್ನು ಗಮನಿಸಿ, 400 ಕಿಲೋ ಮೀಟರ್ ದೂರದಿಂದ ತಮಾಷೆಗಾಗಿ ಬಂದಿದ್ದೇವಾ?. ಸಭೆಯ ಬಗ್ಗೆ ಮೊದಲೇ ಮಾಹಿತಿ ನೀಡಿದ್ರೂ, ಯಾಕೆ ಬಂದಿಲ್ಲ ಎಂದು ಪ್ರಶ್ನಿಸಿದರು.
ಇದಾದ ಕೆಲ ನಿಮಿಷಗಳ ಬಳಿಕ ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾಧಿಕಾರಿಗಳು ಆಗಮಿಸಿ ಸಭೆಯಲ್ಲಿ ಭಾಗವಹಿಸಿದ್ರು.