ರಾಯಚೂರು: ಇಲ್ಲಿನ ರಿಮ್ಸ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಹಾಗೂ ಸಿಬ್ಬಂದಿಗೆ ಸುರಕ್ಷತೆಯ ಆತಂಕ ಎದುರಾಗಿದೆ ಎನ್ನಲಾಗುತ್ತಿದೆ.
ಅಗತ್ಯ ಸುರಕ್ಷತಾ ಸಾಧನಗಳು ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡಬೇಕಾಗಿದೆ. ಇದರಿಂದ ಹಿಂಜರಿಕೆ ಉಂಟಾಗಿದೆ ಎಂದು ಸಿಬ್ಬಂದಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
ಸುರಕ್ಷತಾ ಸಾಧನಗಳನ್ನು ನೀಡದಿದ್ದರೆ ಕೆಲಸಕ್ಕೆ ಬರುವುದಿಲ್ಲ ಎಂದು ಸಿಬ್ಬಂದಿ ಮತ್ತು ವೈದ್ಯರು ಆಸ್ಪತ್ರೆ ಮುಖ್ಯಸ್ಥರ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.
ಈ ನಡುವೆ ರಿಮ್ಸ್ ಆಸ್ಪತ್ರೆಯ 10 ಸಿಬ್ಬಂದಿಯನ್ನು ಒಪೆಕ್ ಆಸ್ಪತ್ರೆ ಕ್ವಾರಂಟೈನ್‌ಗೆ ಸೇರಿಸಲಾಗಿದೆ ಎಂಬ ಸುದ್ದಿಯನ್ನು ರಿಮ್ಸ್ ನಿರ್ದೇಶಕ ಡಾ. ಬಸವರಾಜ ಪೀರಾಪುರ ತಳ್ಳಿಹಾಕಿದ್ದಾರೆ.