ರಾಯಚೂರು : ಲಾಕ್ಡೌನ್ನಿಂದಾಗಿ ಸ್ಟೇಷನರಿ ವಸ್ತುಗಳನ್ನು ಮಾರಾಟ ಮಾಡಿ ಬದುಕು ಸಾಗಿಸುತ್ತಿರುವ 20 ಕ್ಕೂ ಹೆಚ್ಚು ಕುಟುಂಬಗಳು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ, ಇದೀಗ ಅವರು ಭಿಕ್ಷಾಟನೆ ಮಾಡಿ ಬದುಕುವಂತಾಗಿದೆ.
ನಗರದ ಆಶಾಪುರ ರಸ್ತೆಯಲ್ಲಿನ ಪದ್ಮಾವತಿ ಕಾಲೋನಿಯಲ್ಲಿ ವೇಷಗಾರ ಕುಟುಂಬಗಳೆಂದು 20 ಕ್ಕೂ ಹೆಚ್ಚು ಕುಟುಂಬಗಳು ವಾಸ ಮಾಡುತ್ತಿವೆ. ಈ ಕುಟುಂಬಗಳು, ಬಿಂದಿಗೆ, ಬಟ್ಟೆ, ಸ್ಟೇಷನರಿ ವಸ್ತುಗಳನ್ನ ಸೇರಿದಂತೆ ಸಣ್ಣ ಪುಟ್ಟ ವಸ್ತುಗಳನ್ನ ಗ್ರಾಮೀಣ ಪ್ರದೇಶ, ನಗರ, ಪಟ್ಟಣಗಳಲ್ಲಿ ಮಾರಾಟ ಮಾಡಿ, ಬಂದ ಆದಾಯದಿಂದ ಜೀವನ ಸಾಗಿಸುತ್ತಿದ್ರು.
ಇದೀಗ ಲಾಕ್ಡೌನ್ನಿಂದಾಗಿ ವ್ಯಾಪಾರವಿಲ್ಲ. ಕೊರೊನಾ ಭೀತಿಯಿಂದಾಗಿ ವ್ಯಾಪಾರಕ್ಕೆ ಬರದಂತೆ ಹೇಳುತ್ತಿದ್ದಾರೆ. ಇದರಿಂದಾಗಿ ಈ ಕುಟುಂಬಗಳು ಊಟಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಚಿಕ್ಕ ಮಕ್ಕಳು, ಮಹಿಳೆಯರು ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದೇವೆ. ನಮಗೆ ಯಾರಾದರೂ ಸಹಾಯ ಮಾಡಿ ಎಂದು ಕೇಳಿಕೊಳ್ಳುತ್ತಿದ್ದಾರೆ.