ETV Bharat / state

ಕೊರೊನಾ ವಾರಿಯರ್ಸ್​​ ಮೇಲೆ ಹಲ್ಲೆ ಮಾಡಿದ್ರೆ ಕಠಿಣ ಕ್ರಮ : ಡಿಸಿಎಂ ಎಚ್ಚರಿಕೆ

ಮಹಾಮಾರಿ ಕೋವಿಡ್​-19 ವಿರುದ್ದ ಹೋರಾಟ ನಡೆಸುತ್ತಿರುವ ಕೊರೊನಾ ವಾರಿಯರ್ಸ್​ಗಳ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಎಚ್ಚರಿಕೆ ಮಾತು ಹೇಳಿದ್ದಾರೆ.

lakshman-savadi-statement-on-attack-on-corona-warriors
ಲಕ್ಷ್ಮಣ್​ ಸವದಿ
author img

By

Published : Apr 27, 2020, 1:34 PM IST

ರಾಯಚೂರು : ಕೊರೊನಾ ವಾರಿಯರ್ಸ್​ ಮೇಲೆ ಹಲ್ಲೆ ದೌರ್ಜನ್ಯ ಎಸಗುವ ಮೂಲಕ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಲಕ್ಷ್ಮಣ ಸವದಿ ಎಚ್ಚರಿಕೆ ನೀಡಿದ್ದಾರೆ.

ಲಿಂಗಸುಗೂರಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ, ಆಶಾ, ಅಂಗನವಾಡಿ, ಪೊಲೀಸ್ ಇಲಾಖೆ ಅಧಿಕಾರಿಗಳ ಸಿಬ್ಬಂದಿ ಮೇಲೆ ನಡೆಯುವ ಹಲ್ಲೆ, ದೌರ್ಜನ್ಯದಂತ ಪ್ರಕರಣಗಳು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೊರೊನಾ ವಾರಿಯರ್ಸ್​​ ಮೇಲೆ ಹಲ್ಲೆ ಮಾಡಿದ್ರೆ ಕಠಿಣ ಕ್ರಮ

ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ರಾಯಚೂರು ಜಿಲ್ಲೆಯ ಸಂಪೂರ್ಣ ವಿಫಲವಾಗಿದೆ. ಕೊರೊನಾ ವೈರಸ್ ಪತ್ತೆಯಾಗದೆ ಹೋಗಿದ್ದರಿಂದ ತಾವು ಅದೃಷ್ಠವಂತರು. ಸೋಂಕು ಪತ್ತೆಯಾಗಿಲ್ಲ ಎಂಬ ನಿರ್ಲಕ್ಷ್ಯ ಸಲ್ಲದು. ಕೊವಿಡ್-19 ಗೆ ಈವರೆಗೆ ಚಿಕಿತ್ಸೆ ಇಲ್ಲ. ಅಂತೆಯೆ ಅಂತರ ಕಾಯ್ದುಕೊಳ್ಳಲು ಜನತೆ ಮುಂದಾಗಬೇಕು ಎಂದು ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.