ರಾಯಚೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿರುವುದಕ್ಕೆ ಡಿಸಿಎಂ ಲಕ್ಷ್ಮಣ ಸವದಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅಭಿನಂದಿಸಿದ್ದಾರೆ.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಯಿಂದ ಸಮುದಾಯದಲ್ಲಿನ ಬಡವರು ಮತ್ತು ಹಿಂದುಳಿದವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಮತ್ತಷ್ಟು ಪ್ರೋತ್ಸಾಹ ನೀಡಿದ ಶ್ರೇಯಸ್ಸು ಸಿಎಂ ಬಿ.ಎಸ್. ಯಡಿಯೂರಪ್ಪಗೆ ಸಲ್ಲುತ್ತದೆ ಎಂದಿದ್ದಾರೆ.
ನಿನ್ನೆಯಷ್ಟೇ ಡಿಸಿಎಂ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗವು, ವೀರಶೈವ ಲಿಂಗಾಯತರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂದು ಮನವಿ ಮಾಡಿತ್ತು. ಇದಕ್ಕೆ ಸಿಎಂ ಸ್ಪಂದಿಸಿದ್ದಾರೆ.