ರಾಯಚೂರು : ಕೊರೊನಾ ಎಫೆಕ್ಟ್‌ನಿಂದಾಗಿ ಲಿಂಗಸುಗೂರು ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದ್ದು, ಸಾರಿಗೆ ಸಂಸ್ಥೆ ಅಧಿಕಾರಿಗಳು ಪ್ರಯಾಣಿಕರನ್ನು ಕರೆ ತರಲು ಹರಸಾಹಸ ಪಡುತ್ತಿರುವ ದೃಶ್ಯ ಕಂಡುಬಂದಿತು.
ಶನಿವಾರ ವಾರದ ಸಂತೆಗೆ ಗ್ರಾಮೀಣ ಭಾಗದಿಂದ ಹೆಚ್ಚು ಜನ ಬರುವುದು ಸಾಮಾನ್ಯ. ಆದರೆ, ಇಂದು ನಿರೀಕ್ಷಿತ ಪ್ರಮಾಣದ ಪ್ರಯಾಣಿಕರ ಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ ಬಸ್‌ಗಳು ಪ್ರಯಾಣಿಕರಿಗಾಗಿ ಗಂಟೆಗಟ್ಟಲೆ ಕಾಯುತ್ತಾ ನಿಂತಿದ್ದವು.
ಸೊಲ್ಲಾಪುರ, ಹುಬ್ಬಳ್ಳಿ, ಧಾರವಾಡ, ದಾವಣಗೇರಿ, ಶಿವಮೊಗ್ಗ, ಬೀದರ್, ವಿಜಯಪುರ, ಬೆಳಗಾವಿ, ಹೊಸಪೇಟೆ ಸೇರಿದಂತೆ ವಿವಿಧ ಪಟ್ಟಣ ಪ್ರದೇಶಗಳಿಗೆ ಹೊರಡಲು ಸಿದ್ಧಗೊಂಡ ಬಸ್ ಗಳಿಗೆ ಪ್ರಯಾಣಿಕರೇ ಇರಲಿಲ್ಲ. ಇದರಿಂದಾಗಿ ಸಾರಿಗೆ ಸಂಸ್ಥೆ ನಷ್ಟ ಅನುಭವಿಸುವಂತಾಗಿದೆ.
ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಪ್ರಯಾಣಿಕರ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಸಾರಿಗೆ ಸಿಬ್ಬಂದಿ ತಿಳಿಸಿದರು.