ರಾಯಚೂರು : ಎಲ್ಕೆಜಿ ವಿದ್ಯಾರ್ಥಿನಿ ಮೇಲೆ ಆಂಧ್ರ ಬಸ್ ಹರಿದ ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ತಾಲೂಕಿನ ಯರಗೇರಾ ಗ್ರಾಮದ ಸರ್ಕಾರ ಶಾಲೆಯ ಮುಂಭಾಗದ ಮುಖ್ಯರಸ್ತೆಯಲ್ಲಿ ನಡೆದಿದೆ.
ಅಂಕಿತ ಮಲ್ಲೇಶ್ (5) ಮೃತ ಬಾಲಕಿಯೆಂದು ಗುರುತಿಸಲಾಗಿದೆ. ಇಂದು ಶಾಲೆ ಮುಗಿಸಿಕೊಂಡು ವಾಪಸ್ ಮನೆಗೆ ತೆರಳಲು ರಸ್ತೆದಾಟುವಾಗ ಆಂಧ್ರಪ್ರದೇಶಕ್ಕೆ ಸೇರಿದ ಬಸ್‌ವೊಂದು ಬಾಲಕಿ ಮೇಲೆ ಹರಿದಿದೆ.
ಇದನ್ನೂ ಓದಿ: ಬಾಸುಂಡೆ ಬರುವ ರೀತಿ ಹೊಡೆದು ಕ್ಷಮೆ ಕೇಳಿದ ಶಿಕ್ಷಕಿ!
ಇದರಿಂದ ತೀವ್ರ ಸ್ವರೂಪವಾಗಿ ಗಾಯಗೊಂಡ ಬಾಲಕಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾಳೆ. ಮಗಳನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಯರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಸ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ