ರಾಯಚೂರು : ನಗರದಲ್ಲಿ ಯಾವುದೇ ಕೊರೊನಾ ಪಾಸಿಟಿವ್ ದಾಖಲಾಗದ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಹಸಿರು ವಲಯ ಎಂದು ಗುರುತಿಸಲಾಗಿತ್ತು. ಅಲ್ಲದೆ ಲಾಕ್ಡೌನ್ ನಿಯಮದಲ್ಲೂ ಸಡಿಲಿಕೆ ಮಾಡಲಾಗಿದೆ.
ಆದರೆ, ಈ ನಡುವೆ ನಗರದಲ್ಲಿ ವ್ಯಾಪಾರ-ವಹಿವಾಟಿಗೆ ಅವಕಾಶ ಮಾಡಿಕೊಡಲಾಗಿದೆ. ಸ್ಯಾನಿಟೈಸರ್ ಬಳಸುವುದು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸುವ ಮೂಲಕ ನಿಯಮ ಪಾಲನೆ ಮಾಡಬೇಕಿದೆ. ಆದರೆ, ಇದೆಲ್ಲಾ ನಿಯಮಗಳನ್ನು ನಗರದ ಹಲವೆಡೆ ಗಾಳಿಗೆ ತೂರಿ ಜನ ಲಾಕ್ಡೌನ್ ಜಾರಿಯೇ ಆಗಿಲ್ಲ ಎಂಬಂತೆ ವರ್ತಿಸುತ್ತಿದ್ದಾರೆ. ಈ ರೀತಿಯ ನಡತೆಯ ವಿರುದ್ಧ ಕೆಲವರು ಆತಂಕ ವ್ಯಕ್ತಪಡಿಸಿದ್ದಾರೆ.