ETV Bharat / state

ಗ್ರಾಮೀಣ ಪ್ರದೇಶದಲ್ಲಿ ಲಾಕ್‌ಡೌನ್ ಸಡಲಿಕೆ.. ರಾಯಚೂರು ಜಿಲ್ಲಾಧಿಕಾರಿ ಸ್ಪಷ್ಟನೆ

ಹೋಟೆಲ್‌ಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶವಿದೆ. ಹೇರ್ ಕಟಿಂಗ್ ಹಾಗೂ ಬ್ಯೂಟಿ ಪಾರ್ಲರ್ ಶಾಪ್‌ಗಳನ್ನ ತೆರೆಯುವಂತಿಲ್ಲ. ಬಟ್ಟೆ, ಕಿರಾಣಿ ಹಾಗೂ ಇತರೆ ಅಂಗಡಿಗಳು ಓಪನ್ ಮಾಡಬಹುದು. ಮನೆಯಿಂದ ಅವಶ್ಯಕತೆ ಇದ್ದವರು ಮಾತ್ರ ಮಾಸ್ಕ್ ಧರಿಸಿ ಹೊರಬರಬೇಕು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನ ಜಿಲ್ಲಾಧಿಕಾರಿ ನೀಡಿದರು.

Lockdown relaxation in rural area of ​​Raichur district District Collector Clear
ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್
author img

By

Published : Apr 29, 2020, 10:08 AM IST

ರಾಯಚೂರು : ಕೊರೊನಾ ವೈರಸ್‌ನಿಂದ ಮುಕ್ತವಾಗಿ ಹಸಿರು ವಲಯದಲ್ಲಿರುವ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಲಾಕ್‌ಡೌನ್‌ನ ಕೆಲ ನಿಮಯಗಳನ್ನ ಸಡಲಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್ ವೆಂಕಟೇಶ್‌ಕುಮಾರ್ ಹೇಳಿದ್ದಾರೆ.

ಲಾಕ್‌ಡೌನ್ ನಿಯಮ ಸಡಲಿಕೆ ಬಗೆಗೆ ಜಿಲ್ಲಾಧಿಕಾರಿ ಮಾಹಿತಿ..

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿರುವ ಕಂಪನಿ ಪ್ರಾರಂಭಿಸಲು ಜಿಲ್ಲಾಡಳಿತ ಅನುಮತಿ ನೀಡಿದೆ. ಕಂಪನಿಯಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಜೊತೆಗೆ ಕಂಪನಿಯಿಂದ ಮುಚ್ಚಳಿಕೆ ಬರೆಸಿಕೊಂಡ ಕಂಪನಿ ಅನುಮತಿ ನೀಡಲಾಗುವುದು. ಕಂಪನಿಗಳಿಗೆ ಬೇರೆ ಕಡೆಗಳಿಂದ ಸಿಬ್ಬಂದಿ ಬರಬಾರದು ಎಂದರು.

ಹೋಟೆಲ್‌ಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶವಿದೆ. ಹೇರ್ ಕಟಿಂಗ್ ಹಾಗೂ ಬ್ಯೂಟಿ ಪಾರ್ಲರ್ ಶಾಪ್‌ಗಳನ್ನ ತೆರೆಯುವಂತಿಲ್ಲ. ಬಟ್ಟೆ, ಕಿರಾಣಿ ಹಾಗೂ ಇತರೆ ಅಂಗಡಿಗಳು ಓಪನ್ ಮಾಡಬಹುದು. ಮನೆಯಿಂದ ಅವಶ್ಯಕತೆ ಇದ್ದವರು ಮಾತ್ರ ಮಾಸ್ಕ್ ಧರಿಸಿ ಹೊರಬರಬೇಕು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನ ಜಿಲ್ಲಾಧಿಕಾರಿ ನೀಡಿದರು.

ಇಂದು 61 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಹೊಸದಾಗಿ 111 ಜನರ ಗಂಟಲು ದ್ರವದ ಮಾದರಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಜಿಲ್ಲೆಯಿಂದ ಈವರೆಗೂ 1,066 ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರಲ್ಲಿ 813 ನೆಗೆಟಿವ್ ಎಂದು ಬಂದಿವೆ. ಇನ್ನೂ 253 ಜನರ ವರದಿ ಬರುವುದು ಬಾಕಿಯಿದೆ.

ಫೀವರ್ ಕ್ಲಿನಿಕ್​​​ನಲ್ಲಿ 3,466 ಜನರನ್ನು ತಪಾಸಣೆ ನಡೆಸಲಾಗಿದೆ. ಸ್ಥಳೀಯ ಓಪೆಕ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ 73 ಜನರಿಗೆ ಚಿಕಿತ್ಸೆ ನೀಡಲಾಗಿದೆ. 60 ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಪಕ್ಕದ ರಾಜ್ಯದಿಂದ ಆಗಮಿಸಿದ್ದ 801 ಜನರನ್ನು ಸರ್ಕಾರಿ ಕಟ್ಟಡದಲ್ಲಿ ಕ್ವಾರಂಟೈನ್‍ಲ್ಲಿರಿಸಲಾಗಿದೆ. ಅವರಲ್ಲಿ 719 ಜನರನ್ನು ಕ್ವಾರಂಟೈನ್​​​ನಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.