ರಾಯಚೂರು: ಕಲ್ಲಿನಿಂದ ಹೊಡೆದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರು ತಾಲೂಕಿನ ಗುಂಜಹಳ್ಳಿ ಗ್ರಾಮದ ಹೊರವಲಯದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ವ್ಯಕ್ತಿ ಮೀಸೆ ಬೋಳಿಸಿದ್ದು, ಇದು ಪೂರ್ವ ನಿಯೋಜಿತವಾಗಿ ಸ್ಕೆಚ್ ಹಾಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಮೀಸೆ ಬೋಳಿಸಿರುವುದರಿಂದ ಸ್ಥಳದಲ್ಲಿ ಕೂದಲು ಸಹ ಪತ್ತೆಯಾಗಿವೆ.
ಸದ್ಯ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಯರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.