ETV Bharat / state

ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಶಂಕೆ: ರಾಯಚೂರಲ್ಲಿ ವ್ಯಕ್ತಿಯ ಬರ್ಬರ ಕೊಲೆ - ರಾಯಚೂರಿನಲ್ಲಿ ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಶಂಕೆ ವ್ಯಕ್ತಿಯ ಕೊಲೆ

ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಿಣಿ ಬ್ರಿಡ್ಜ್ ಬಳಿ ವ್ಯಕ್ತಿಯೋರ್ವರನ್ನ ಹತ್ಯೆ ಮಾಡಲಾಗಿದ್ದು, ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ.

ವ್ಯಕ್ತಿಯ ಕೊಲೆ
ವ್ಯಕ್ತಿಯ ಕೊಲೆ
author img

By

Published : Jan 12, 2022, 7:43 PM IST

ರಾಯಚೂರು : ಜಿಲ್ಲೆಯಲ್ಲಿ ಬರ್ಬರ ಕೊಲೆಯೊಂದು ನಡೆದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಿಣಿ ಬ್ರಿಡ್ಜ್ ಬಳಿ ನಡೆದಿದೆ. ಗಲಗ ಗ್ರಾಮದ ಭೀಮಣ್ಣ(40) ಮೃತ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಗಲಗ ಗ್ರಾಮದ ಭೀಮಣ್ಣ ತನಗೆ ವಿವಾಹವಾಗಿದ್ದರೂ ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗ್ತಿದೆ. ಈ ಮಹಿಳೆಯೊಂದಿಗೆ ಬೆಂಗಳೂರಿಗೆ ಹೋಗಿ ವಾಸವಿದ್ದ ಎನ್ನುವ ಆರೋಪ ಕೇಳಿ ಬಂದಿದೆ.

ಇತ್ತೀಚೆಗೆ ಭೀಮಣ್ಣ ಗ್ರಾಮಕ್ಕೆ ಆಗಮಿಸಿದ್ದು, ಆತನ ಚಲನವಲನ ಗಮನಿಸಿ ದುಷ್ಕರ್ಮಿಗಳು ಹತ್ಯೆ ಮಾಡಿರಬಹುದು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆಂದು ದೇವದುರ್ಗ ಸರ್ಕಾರಿ ಆಸ್ಪತ್ರೆಗೆ ರವಾನಿಸಿ, ತನಿಖೆ ಕೈಗೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.