ರಾಯಚೂರು: ಕೌಟುಂಬಿಕ ಕಲಹದಿಂದ ಮನನೊಂದು ವ್ಯಕ್ತಿಯೋರ್ವರು ವಿದ್ಯುತ್ ಪರಿವರ್ತಕ (ಟಿಸಿ) ಹಿಡಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ ನಡೆದಿದೆ.
ಜಿದುರಗಪ್ಪ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕೌಟುಂಬಿಕ ಕಲಹಕ್ಕೆ ಮನನೊಂದು ವಿದ್ಯುತ್ ಪರಿವರ್ತಕ ಅಳವಡಿಸಿರುವ ಕಂಬವನ್ನು ಹಿಡಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಸಿರವಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.