ರಾಯಚೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಮಾನವಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ನೀರಮಾನವಿ ಗ್ರಾಮದ ನಿವಾಸಿ ಶಿವಲಿಂಗ ಗಡಗಿ (48) ಎಂದು ಗುರುತಿಸಲಾಗಿದೆ. ಮುಂಜಾನೆ ಎಂದಿನಂತೆ ವಾಕಿಂಗ್ ಮಾಡುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಘಟನೆ ನಡೆಯಿತು.
ಇದನ್ನೂ ಓದಿ: ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ: ಜೆಡಿಎಸ್
ಡಿಕ್ಕಿ ಹೊಡೆದ ವಾಹನ ಯಾವುದು ಎನ್ನುವುದು ತಿಳಿದುಬಂದಿಲ್ಲ. ಸ್ಥಳಕ್ಕೆ ಮಾನವಿ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ. ಕಾರು ಡಿಕ್ಕಿ ಹೊಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.