ರಾಯಚೂರು : ವಾಯುವಿಹಾರಕ್ಕೆ ತೆರಳುತ್ತಿದ್ದ ದಂಪತಿ ಮೇಲೆ ಕಾರು ಹರಿದು ಪತಿ ಸ್ಥಳದಲ್ಲೇ ಮೃತಪಟ್ಟಿದ್ರೆ, ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
![Man died in road accident at Raichur](https://etvbharatimages.akamaized.net/etvbharat/prod-images/14203148_thum.jpg)
ಡ್ಯಾಡಿ ಕಾಲೋನಿ ನಿವಾಸಿ ಎಸ್.ಎಸ್.ಪಾಟೀಲ್ (70) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಕಂದಾಯ ಇಲಾಖೆಯ ನಿವೃತ್ತ ಸರ್ವೇಯರ್ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಮೃತರ ಪತ್ನಿ ಹಾಗೂ ಕಾರು ಚಾಲಕನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಹಾಗೂ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಡಿ ವಾಹನ ದಟ್ಟಣೆಯನ್ನು ಸರಿಪಡಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಇದನ್ನೂ ಓದಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಕೊಲೆ.. ವಿಜಯಪುರ ಜಿಲ್ಲೆಯಲ್ಲಿ ಹರಿದ ನೆತ್ತರು