ರಾಯಚೂರು : ನಗರಸಭೆಯಿಂದ ಪೂರೈಕೆಯಾದ ಕಲುಷಿತ ನೀರಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ನಗರದ ಅರಬ್ ಮೊಹಲ್ಲಾ ನಿವಾಸಿ ಆಟೋ ಡ್ರೈವರ್ ಮಹಮ್ಮದ್ ನೂರ್ (43) ಮೃತ ದುರ್ದೈವಿ.
ನಗರಸಭೆಯಿಂದ ಪೂರೈಕೆಯಾದ ಕಲುಷಿತ ನೀರು ಕುಡಿದು ವಾಂತಿ, ಭೇದಿಯಿಂದ ಬಳಲುತ್ತಿದ್ದ ಇವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ, ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮನೆಯ ಯಜಮಾನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈಗಾಗಲೇ ಮಲ್ಲಮ್ಮ ಮತ್ತು ಅಬ್ದುಲ್ ಗಫಾರ್ ಎಂಬುವರು ಕಲುಷಿತ ನೀರು ಸೇವಿಸಿ ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ. ಈಗ ಮಹಮ್ಮದ್ ನೂರ್ ಬಲಿಯಾಗುವ ಮೂಲಕ ಮೂವರು ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇನ್ನೂ ಕ್ರಮಕೈಗೊಳ್ಳದ ನಗರಸಭೆಯ ವಿರುದ್ಧ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಇದನ್ನೂ ಓದಿ: ರಾಯಚೂರಲ್ಲಿ ಕಲುಷಿತ ನೀರು ಕುಡಿದು 60ಕ್ಕೂ ಹೆಚ್ಚು ಜನ ಅಸ್ವಸ್ಥ!