ರಾಯಚೂರು: ನಗರದ ಮಹಿಳಾ ಸಮಾಜ ಮೈದಾನದಲ್ಲಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿ ಕೊಲೆಗೈಯ್ಯಲಾಗಿದೆ.
ನಗರದ ಅಲ್ಲಮಪ್ರಭು ಸಹಕಾರ ಸಂಘದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಮ್ರಾನ್ (30) ಮೃತ ವ್ಯಕ್ತಿ. ವ್ಯಕ್ತಿಯ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಘಟನೆಯ ಬಗ್ಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಪೊಲೀಸ್ ಶ್ವಾನದಳ ಆಗಮಿಸಿ ತನಿಖೆ ನಡೆಸಿದ್ದು, ಡಿವೈಎಸ್ಪಿ ಶಿವನಗೌಡ, ಸಿಪಿಐ ಫಸಿವುದ್ದೀನ್, ಸದರ ಬಜಾರ್ ಪೊಲೀಸ್ ಠಾಣೆ ಪಿಎಸ್ಐ ಮಂಜುನಾಥ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳಿಗಾಗಿ ಶೋಧ ಮುಂದುವರೆಸಿದ್ದಾರೆ.