ರಾಯಚೂರು: ವ್ಯಕ್ತಿಯೊಬ್ಬನನ್ನು ಕುಟುಂಬದ ಸದಸ್ಯರೇ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಅಂಬರೇಶ್(44) ಕೊಲೆಯಾದ ವ್ಯಕ್ತಿ. ಇಸ್ಪೀಟ್, ಕುಡಿತದ ಚಟಕ್ಕೆ ಬಿದ್ದಿದ್ದ ಈತ ಸಾಲ ಮಾಡಿದ್ದನಂತೆ. ಅಲ್ಲದೇ ನಿತ್ಯ ಮನೆಯಲ್ಲಿ ಕಿರುಕುಳ ನೀಡುತ್ತಿದ್ದನಂತೆ. ಇದನ್ನು ಸಹಿಸದ ಈತನ ತಾಯಿ, ಅಕ್ಕ ಹಾಗೂ ಅಕ್ಕನ ಮಗ (ಅಳಿಯ) ಮೂವರು ಸೇರಿ ಕೊಲೆ ಮಾಡಿದ್ದಾರೆ ಎನ್ನಲಾಗ್ತಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಹತ್ಯೆ ಮಾಡಿದ ಬಳಿಕ ಆರೋಪಿಗಳು ತಮ್ಮ ಮೇಲೆ ಅನುಮಾನ ಬಾರದಂತೆ ಶವ ರಸ್ತೆಯಲ್ಲಿ ಎಸೆದಿದ್ದರು. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದಾಗ, ಸತ್ಯ ಬಯಲಿಗೆ ಬಂದಿದೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.
ಈ ಸಂಬಂಧ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕಂಟೈನರ್ ವಾಹನಕ್ಕೆ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ವಸ್ತುಗಳು