ರಾಯಚೂರಿನಲ್ಲಿ ಬಿಜೆಪಿಯ ಹಲವು ಮುಂಖಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ - ಕಾರ್ಯಕರ್ತರು
ಮಾನವಿ ಪಟ್ಟಣದ ಈದ್ಗಾ ಮೈದಾನದಲ್ಲಿ ತಾಲೂಕು ಕಾಂಗ್ರೆಸ್‌ನಿಂದ ಆಯೋಜಿಸಿದ ಕಾಂಗ್ರೆಸ್ ಸೇರ್ಪಡೆ ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿಯ ಹಲವು ಮುಂಖಡರು ಮತ್ತು ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು
ರಾಯಚೂರು: ಜಿಲ್ಲೆಯ ಲೋಕಸಭೆ ಚುನಾವಣೆ ರಂಗೇರುತ್ತಿದೆ. ಮಾನವಿ ಪಟ್ಟಣದ ಈದ್ಗಾ ಮೈದಾನದಲ್ಲಿ ತಾಲೂಕು ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಕಾಂಗ್ರೆಸ್ ಸೇರ್ಪಡೆ ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿಯ ಹಲವು ಮುಂಖಡರು ಮತ್ತು ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.
ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜ್, ಹಾಲಿ ಸಂಸದರು, ಶಸಕರು, ಜಿಲ್ಲಾ ಮುಖಂಡರಸಮ್ಮುಖದಲ್ಲಿ ಸೇರ್ಪಡೆಯಾದರು. ಕಳೆದ ಬಾರಿ ಬಿಜೆಪಿ ಅಭ್ಯರ್ಥಿಗಳಾದ ಶರಣಪ್ಪ ನಾಯಕ ಗುಡದಿನ್ನಿ, ದೊಡ್ಡಬಸಪ್ಪಗೌಡ, ಬ್ರಿಜೇಶ್ ಪಾಟೀಲ್ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಸೇರ್ಪಡೆಯಾದರು.
ಜಿಲ್ಲೆಯಲ್ಲಿಕಾಂಗ್ರೆಸ್ ಲೋಕಸಭೆ ಚುನಾವಣೆಯ ಭರ್ಜರಿ ಪ್ರಚಾರವನ್ನ ನಡೆಸಿದ್ದು, ಮಾನವಿ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಗೆ ಬಿಗ್ ಶಾಕ್ ನೀಡಿದಂತಾಗಿದೆ. ಸಮಾವೇಶದಲ್ಲಿ ಭಾಗವಹಿಸಿದ ಮುಖಂಡರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ, ದೇಶದ ಒಳಿತಿಗೆ ಕಾಂಗ್ರೆಸ್ ಅಭ್ಯರ್ಥಿಯನ್ನ ಬೆಂಬಲಿಸುವಂತೆ ಮುಖಂಡರು ಕೋರಿದ್ರು. ಇದಕ್ಕೂ ಮುನ್ನ ಸೇರ್ಪಡೆಗೊಳ್ಖುವ ಪಟ್ಟಣದಲ್ಲಿ ಪ್ರಮುಖ ರಸ್ತೆ ಮೆರವಣಿಗೆ ನಡೆಸಿ, ವೇದಿಕೆ ಕರೆತರಲಾಯಿತು.