ರಾಯಚೂರು: ಸಿಎಎ, ಎನ್ಆರ್ಸಿ, ಎನ್ಪಿಆರ್ ಕಾಯ್ದೆಯನ್ನು ವಿರೋಧಿಸಿ ಜಿಲ್ಲೆಯಲ್ಲಿ ಮುಸ್ಲಿಂ ಮಹಿಳೆಯರು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು.
ಸಂವಿಧಾನ ಹಕ್ಕುಗಳ ನಾಗರಿಕ ವೇದಿಕೆಯಿಂದ ಪ್ರತಿಭಟನೆ ಆಯೋಜಿಸಿದ ಮುಸ್ಲಿಂ ಮಹಿಳೆಯರು, ನಗರದ ಮಹಿಳಾ ಸಮಾಜದಿಂದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆಯ ಟಿಪ್ಪು ಸುಲ್ತಾನ್ ಗಾರ್ಡ್ ತನಕ ಕಾಯಿದೆಯನ್ನು ವಿರೋಧಿಸಿ ಪ್ರತಿಭಟನೆ ರ್ಯಾಲಿ ನಡೆಸಿದರು. ಹಿಂದೂ-ಮುಸ್ಲಿಂ ಧರ್ಮದವರು ಎಲ್ಲರೂ ಒಟ್ಟಾಗಿದ್ದೇವೆ. ಆದರೆ ಈ ಕಾಯಿದೆಯಿಂದ ಬೇರ್ಪಡಿಸುವುದಕ್ಕೆ ಬಿಜೆಪಿ ಸರ್ಕಾರ ಸಿಎಎ, ಎನ್ಆರ್ಸಿ ಕಾಯಿದೆಯನ್ನು ಜಾರಿಗೊಳಿಸಿದೆ. ಕೂಡಲೇ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಯಿದೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಇನ್ನು ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು. ಪ್ರತಿಭಟನಾ ಮೆರವಣಿಗೆಯಲ್ಲಿ 200 ಅಡಿ ಉದ್ದದ ಧ್ವಜವನ್ನು ಪ್ರದರ್ಶನ ಮಾಡಿರುವುದು ವಿಶೇಷವಾಗಿ ಗಮನ ಸೆಳೆಯಿತು.