ರಾಯಚೂರು: ರಾಯಚೂರು ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮೂರು ದಿನಗಳ ಕಾಲ ಎಫ್ಕೆಸಿಸಿಐ ಹಾಗೂ ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಸಂಯುಕ್ತ ಆಶ್ರಯದಲ್ಲಿ ಕೈಗಾರಿಕೋದ್ಯಮಿಗಳ ಸಮಾವೇಶ ಆಯೋಜಿಸಲಾಗಿದೆ ಎಂದು ವಾಣಿಜ್ಯೋದ್ಯಮಿಗಳ ಸಂಘದ ಜಿಲ್ಲಾಧ್ಯಕ್ಷ ತ್ರಿವಿಕ್ರಮ ಜೋಶಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಲ್ಲೆಯಲ್ಲಿ ಅಕ್ಕಿ ಗಿರಣಿ, ಜಿನ್ನಿಂಗ್ ಫ್ಯಾಕ್ಟರಿ ಸೇರಿದಂತೆ ಈ ಭಾಗದ ಕೈಗಾರಿಕೆಗಳ ಸ್ಥಿತಿಗತಿಯ ಅಭಿವೃದ್ಧಿಯ,ಜಿಎಸ್ಟಿ ಹಾಗೂ ಇತರ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.
ಸಮಾವೇಶದ ಕುರಿತು ನಾಳೆ ಅಕ್ಟೋಬರ್ 11 ರಂದು ಎಫ್ಕೆಸಿಸಿ ರಾಜ್ಯಾಧ್ಯಕ್ಷ ಸಿ.ಜನಾರ್ದನ ನೇತೃತ್ವದಲ್ಲಿ ಖಾಸಗಿ ಹೋಟೆಲ್ನಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು ಅ.12ರಿಂದ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳ ಕೈಗಾರಿಕೋದ್ಯಮಿಗಳು, ಎಪಿಎಂಸಿ ವರ್ತಕರು ಸೇರಿದಂತೆ ಗಣ್ಯರು ಆಗಮಿಸಲಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.