ETV Bharat / state

ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ: ವಿವಿಧ ವಿಷಯಗಳ ಬಗ್ಗೆ ಚರ್ಚೆ - ಕೊರೊನಾ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ

ಮುಂಗಾರು ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವುದು, ಕುಡಿಯುವ ನೀರು ಒದಗಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಲಾಯಿತು.

Meeting with the Disaster Management Authority
ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
author img

By

Published : May 27, 2020, 7:42 PM IST

ರಾಯಚೂರು: ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಈ ಸಭೆಯಲ್ಲಿ ಕೋವಿಡ್-19 ಹರಡುವಿಕೆ ತಡೆಯುವಿಕೆ, 2020-21ನೇ ಸಾಲಿನ ಮುಂಗಾರು ಹಂಗಾಮಿಗೆ ನೆರೆ ಹಾವಳಿ ಅಪ್ಪಳಿಸಿದರೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

ಪ್ರಸಕ್ತ ಮುಂಗಾರು ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವುದು. ಮಳೆ ಕೊರತೆ ಎದುರಾದರೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸಂಗ್ರಹಣೆ, ಉದ್ಯೋಗ ಖಾತರಿ, ಕೃಷಿ ಚಟುವಟಿಕೆ ಮೇಲೆ ಬೀರುವ ಪರಿಣಾಮಗಳಿಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು, ಸಹಾಯಕ ಆಯುಕ್ತರು, ತಹಶೀಲ್ದಾರ್ ಭಾಗವಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.