ETV Bharat / state

ಸೆ. 19ರಂದು ಮೆಗಾ ಇ ಲೋಕ ಅದಾಲತ್​​​

ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯ ಹೈಕೋರ್ಟ್​ನಿಂದ ಸೆ. 19ರಂದು ಮೆಗಾ ಇ ಲೋಕ ಅದಾಲತ್ ಆಯೋಜಿಸಿ ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಕಕ್ಷಿದಾರರಿಗೆ ಸುವರ್ಣ ಅವಕಾಶ ಕಲ್ಪಿಸಲಾಗಿದೆ.

author img

By

Published : Aug 29, 2020, 8:26 AM IST

Megha Ee Lok Adalat on Sept
ಸೆ.19 ರಂದು ಮೇಘಾ ಇ ಲೋಕ್ ಅದಾಲತ್: ನ್ಯಾ. ಅರವಿಂದ್ ಕುಮಾರ್

ರಾಯಚೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ದೇಶದಲ್ಲಿ ಇದೇ ಮೊದಲ ಬಾರಿಗೆ ಸೆ. 19ರಂದು ಮೆಗಾ ಇ ಲೋಕ ಅದಾಲತ್ ಆಯೋಜಿಸಿ ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಕಕ್ಷಿದಾರರಿಗೆ ಸುವರ್ಣ ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ಹೈಕೋರ್ಟ್​ ನ್ಯಾಯಮೂರ್ತಿ ಅರವಿಂದ್ ಕುಮಾರ್ ಹೇಳಿದರು.

ಸೆ. 19ರಂದು ಇ ಲೋಕ ಅದಾಲತ್

ಶುಕ್ರವಾರ ಬೆಂಗಳೂರಿನ ಹೈಕೋರ್ಟ್​ನಿಂದ ವಿಡಿಯೋ ಸಂವಾದ ಉದ್ದೇಶಿಸಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಹಾಗೂ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ಇದೇ ಮೊದಲ ಬಾರಿಗೆ ಇ ಅದಾಲತ್ ಹಮ್ಮಿಕೊಳ್ಳಲಾಗಿತ್ತಿದ್ದು, ರಾಜಿ ಸಂಧಾನ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿ ನ್ಯಾಯ ಒದಗಿಸುವ ಕೆಲಸ ಮಾಡಲಾಗುತ್ತದೆ. ಜಾತಿ, ಧರ್ಮ, ಆರ್ಥಿಕ ಸ್ಥಿತಿಗತಿಗಳನ್ನು ಹೊರತುಪಡಿಸಿ ಸರ್ವರರಿಗೂ ನ್ಯಾಯವನ್ನು ಸಕಾಲದಲ್ಲಿ ಒದಗಿಸಲು ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ.

ಮೊದಲಿಗೆ ಮೋಟಾರ್ ವಾಹನಗಳ ವಿಮೆ ಸಂಬಂಧಿತ ಪ್ರಕರಣಗಳಲ್ಲಿ ಅರ್ಹರಿಗೆ ನ್ಯಾಯ ಒದಗಿಸಲು ಸಂಬಂಧಿತ ವಿಮಾ ಕಂಪನಿಗಳೊಂದಿಗೆ ನಾಲ್ಕು ಬಾರಿ ಪೂರ್ವಭಾವಿ ಸಭೆ ನಡೆಸಲಾಗಿದೆ. ವಕೀಲರು ಅವರ ಕಕ್ಷಿದಾರರಿಗೂ ಕಚೇರಿ ಅಥವಾ ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕವೇ ಪ್ರಕರಣಗಳಿಗೆ ವಾದ ಮಂಡಿಸಿ ನ್ಯಾಯ ಪಡೆಯಬಹುದಾಗಿದೆ. ಕೇವಲ ದಾಖಲಾತಿಗಳನ್ನು ಆಪ್‌ಲೋಡ್ ಮಾಡಿ ವಿಮಾ ಕಂಪನಿಗೆ ಕಳುಹಿಸಬೇಕು. ಇದನ್ನು ರಾಜ್ಯದ ಪ್ರತಿಯೊಂದು ಜಿಲ್ಲೆ, ತಾಲೂಕುಗಳಲ್ಲಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ರಾಜ್ಯ ಹೈಕೋರ್ಟ್​ನ ನ್ಯಾಯಮೂರ್ತಿಗಳಾದ ಅಲೋಕ್ ಆರಾದ್ಯ ಮಾತನಾಡಿ, ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯ ಹೈಕೋರ್ಟ್​ನಿಂದ ಈ ರೀತಿಯ ಪ್ರಯತ್ನ ಮಾಡಲಾಗುತ್ತಿದ್ದು, ಕಕ್ಷಿದಾರರು ನ್ಯಾಯಾಲಯಕ್ಕೆ ಹಾಜರಾಗದೆ ಮನೆ ಅಥವಾ ಕಚೇರಿಯಲ್ಲಿ ಕುಳಿತು ವಾದ ಮಂಡಿಸಿ ನ್ಯಾಯ ಪಡೆಯಬಹುದಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.