ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ಲ ಪುರಸಭೆ ವ್ಯಾಪ್ತಿಯ ಮೇಗಳಪೇಟೆ ಯುವತಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ, ವರ್ತಕರು ಮಧ್ಯಾಹ್ನ 2 ಗಂಟೆ ಬಳಿಕ ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ.
ಭಾನುವಾರ ಮೇಗಳಪೇಟೆ ಯುವತಿಗೆ ಕೊರೊನಾ ದೃಢಪಟ್ಟಿತ್ತು. ಹೀಗಾಗಿ ತುರ್ತುಸಭೆ ನಡೆಸಿದ ವರ್ತಕರು, ಮಧ್ಯಾಹ್ನ 2 ಗಂಟೆ ಬಳಿಕ ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನ ಬಂದ್ ಮಾಡಲು ನಿರ್ಧರಿಸಿದ್ದಾರೆ.
ಒಂದು ವೇಳೆ ಮುದಗಲ್ಲ ಪ್ರದೇಶದಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾದಲ್ಲಿ ಸ್ವಯಂಪ್ರೇರಿತ ಲಾಕ್ಡೌನ್ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.