ರಾಯಚೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಇಂದು ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದರು.
ಬೆಂಗಳೂರಿನಿಂದ ಮಂತ್ರಾಲಯಕ್ಕೆ ತೆರಳಿದ ಸಚಿವ ಕೆ ಎಸ್ ಈಶ್ವರಪ್ಪ ಅವರು, ಶ್ರೀರಾಘವೇಂದ್ರ ಸ್ವಾಮಿಯ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದುಕೊಂಡರು. ಬಳಿಕ ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರನ್ನ ಭೇಟಿಯಾಗಿ ಕುಶಲೋಪರಿ ಮಾತನಾಡಿ ಆಶೀರ್ವಾದ ಪಡೆದರು. ಸಚಿವರಿಗೆ ಶ್ರೀಮಠದಿಂದ ಸನ್ಮಾನಿಸುವ ಮೂಲಕ ಗೌರವ ಸಲ್ಲಿಸಲಾಯಿತು.


ಮಂತ್ರಾಲಯದಿಂದ ರಾಯಚೂರಿಗೆ ಆಗಮಿಸಲಿರುವ ಸಚಿವರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ:ಬುಡ್ಗಾಮ್ ಎನ್ಕೌಂಟರ್.. ಇಬ್ಬರು ಪೊಲೀಸರು ಹುತಾತ್ಮ, ಮೂವರು ಉಗ್ರರು ಬಲಿ..