ETV Bharat / state

ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ ಕೇವಲ ಊಹಾಪೋಹ: ಸಚಿವ ಶಿವರಾಮ್ ಹೆಬ್ಬಾರ್ - ನಾಯಕತ್ವ ಬದಲಾವಣೆ ಕೇವಲ ವದಂತಿ

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕೇವಲ ವದಂತಿ. ಕೇಂದ್ರ ಹಾಗೂ ರಾಜ್ಯದಲ್ಲಿ ಸಮರ್ಥ ನಾಯಕತ್ವದಲ್ಲಿ ಸರ್ಕಾರ ಮುನ್ನಡೆಯುತ್ತಿದೆ ಎಂದು ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.

Minister Shivaram Hebbar Statement
ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ ಕೇವಲ ಊಹಾಪೋಹ: ಸಚಿವ ಶಿವರಾಮ್ ಹೆಬ್ಬಾರ್
author img

By

Published : Jul 30, 2020, 7:01 PM IST

Updated : Jul 30, 2020, 7:36 PM IST

ರಾಯಚೂರು: ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ ಕೇವಲ ಊಹಾಪೋಹ ಎಂದು ಕಾರ್ಮಿಕ ಹಾಗೂ ಸಕ್ಕರೆ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ ಕೇವಲ ಊಹಾಪೋಹ: ಸಚಿವ ಶಿವರಾಮ್ ಹೆಬ್ಬಾರ್

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕೇವಲ ವದಂತಿಯಾಗಿದ್ದು, ಕೇಂದ್ರ ಹಾಗೂ ರಾಜ್ಯದಲ್ಲಿ ಸಮರ್ಥ ನಾಯಕತ್ವದಲ್ಲಿ ಸರ್ಕಾರ ಮುನ್ನಡೆಯುತ್ತಿದೆ. ಸಚಿವ ಸಂಪುಟ ವಿಸ್ತರಣೆ, ಪುನಾರಚನೆಗೆ ಮುಖ್ಯಮಂತ್ರಿ ಪರಮಾಧಿಕಾರವನ್ನ ಹೊಂದಿದ್ದಾರೆ. ಹೆಚ್.ವಿಶ್ವನಾಥ್​, ಎಂ.ಟಿ.ಬಿ. ನಾಗರಾಜ್​ಗೆ ಸಚಿವ ಸ್ಥಾನ ನೀಡುವ ಕುರಿತಂತೆ ಸಿಎಂ ತೀರ್ಮಾನ ಕೈಗೊಳ್ಳುತ್ತಾರೆ.

ರಾಜ್ಯ ರಾಜಕಾರಣದಲ್ಲಿ ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ ಎಂಬ ಸಿ‌.ಪಿ. ಯೋಗೇಶ್ವರ್​ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ನನಗೆ ಮಾಹಿತಿಯಿಲ್ಲ. ನಾನು ಪ್ರವಾಸದಲ್ಲಿದ್ದೇನೆ. ಆ ವಿಚಾರವನ್ನು ತಿಳಿದುಕೊಂಡು ಉತ್ತರಿಸುತ್ತೇನೆ ಎಂದರು.

Last Updated : Jul 30, 2020, 7:36 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.