ETV Bharat / state

ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಶ್ರೀರಾಮುಲು

ರಾಯಚೂರಿನಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ 2019-2020 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಚಾಲನೆ ನೀಡಿದರು‌.

raichur
ಸಚಿವ ಶ್ರೀರಾಮುಲು
author img

By

Published : Dec 25, 2019, 11:33 AM IST

ರಾಯಚೂರು: ಜಿಲ್ಲಾ ಮಟ್ಟದ ಯುವಜನೋತ್ಸವ 2019-2020 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಚಾಲನೆ ನೀಡಿದರು‌.

ಜಿಲ್ಲಾ ಮಟ್ಟದ ಯುವಜನೋತ್ಸವ

ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವ, ಯುವಕರು ಸ್ವಾವಲಂಬಿ ಜೀವನ ನಡೆಸುವುದಕ್ಕೆ ಸರ್ಕಾರ ಕೌಶಲ್ಯ ತರಬೇತಿ‌ ನೀಡುವ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಯುವಕರು ಸಹ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಕೃಷಿ, ವ್ಯಾಪಾರ, ಕೈಗಾರಿಕೆ ಹಾಗೂ ಸಮಾಜ ಸೇವೆಯಲ್ಲಿ‌ ತೊಡಗಬೇಕು ಎಂದು ಹೇಳಿದರು.

ಇನ್ನು ಕಾರ್ಯಕ್ರಮದಲ್ಲಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ, ಬಸವನಗೌಡ ದದ್ದಲ್, ಜಿ.ಪಂ‌. ಸಿಇಒ ಲಕ್ಷ್ಮೀಕಾಂತ್ ರೆಡ್ಡಿ, ಎಸ್ಪಿ ಡಾ.ಸಿ.ಬಿ.ವೇದಮೂರ್ತಿ, ಯುವಜನ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Intro:ರಾಯಚೂರು ಜಿಲ್ಲಾ ಮಟ್ಟದ ಯುವಜನೋತ್ಸವ ೨೦೧೯-೨೦೨೦ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಚಾಲನೆ ನೀಡಿದ್ರು‌.

Body:ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಈ ವೇಳೆ ಮಾತನಾಡಿದ ಸಚಿವ ಶ್ರೀರಾಮುಲು, ಯುವಕರು ಅನೈತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಕೆಟ್ಟ ಗುಣಗಳನ್ನ ಕಲಿಯುತ್ತಿದ್ದಾರೆ. ಆದ್ರೆ ಯುವಕರು ಒಳ್ಳೆಯ ಗುಣಗಳನ್ನ ಆಳವಡಿಸಿಕೊಂಡು ಸಂಸ್ಕೃತರಾಗಿ ಸಮಾಜದಲ್ಲಿ ಬಾಳಬೇಕು.‌ ಸರಕಾರ ಸಹ ಯುವಕರಿಗಾಗಿ ಯೋಜನೆಗಳನ್ನ ತರಲಾಗಿದೆ. ಯುವಕರು ಸ್ವಾವಲಂಬಿ ಜೀವನ ನಡೆಸುವುದಕ್ಕೆ ಸರಕಾರ ಕೌಶಲ್ಯ ತರಬೇತಿ‌ ನೀಡುವ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಯುವಕರು ಸಹ ಸರಕಾರಸ ಯೋಜನೆದ ಯೋಜನೆಗಳನ್ನ‌ ಸದುಪಯೋಗ ಪಡಿಸಿಕೊಳ್ಳುವ ಮೂಲಕ, ಕೃಷಿ, ವ್ಯಾಪಾರ, ಕೈಗಾರಿಕೆ ಹಾಗೂ ಸಮಾಜ ಸೇವೆಯಲ್ಲಿ‌ ತೊಡಗಬೇಕು ಎಂದು ಹೇಳಿದ್ರು.

Conclusion:ಕಾರ್ಯಕ್ರಮದಲ್ಲಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ, ಬಸವನಗೌಡ ದದ್ದಲ್, ಜಿ.ಪಂ‌. ಸಿಇಒ ಲಕ್ಷ್ಮೀಕಾಂತ್ ರೆಡ್ಡಿ, ಎಸ್ಪಿ ಡಾ.ಸಿ.ಬಿ.ವೇದಮೂರ್ತಿ, ಯುವಜನ ಇಲಾಖೆಯ ಅಧಿಕಾರಿಗಳು, ಇತರರಿದ್ದರು.

ಬೈಟ್.೧: ಶ್ರೀರಾಮುಲು, ಜಿಲ್ಲಾ ಉಸ್ತುವಾರಿ ಮಂತ್ರಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.