ETV Bharat / state

ಜಿಲ್ಲಾ ಕೋರ್ಟ್​ನ ಸತ್ರ ನ್ಯಾಯಾಧೀಶರನ್ನು ನ್ಯಾಯಾಂಗ ಇಲಾಖೆಯಿಂದ ವಜಾಗೊಳಿಸಬೇಕು: ಶಾಸಕ ಕೆ. ಶಿವನಗೌಡ ನಾಯಕ - ನ್ಯಾಯಾಧೀಶರನ್ನ ವಜಾಗೊಳಿಸುವಂತೆ ಶಾಸಕ ಕೆ. ಶಿವನಗೌಡ ನಾಯಕ ಒತ್ತಾಯ

ಮಾನ್ಯ ಹೈಕೋರ್ಟ್ ನ್ಯಾಯಮೂರ್ತಿ ಅವರಿಗೆ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರನ್ನು ಸೇವಯಿಂದ ವಜಾಗೊಳಿಸಬೇಕು ಎನ್ನುವ ಒತ್ತಾಯ ಮಾಡುತ್ತೇವೆ. ಜತೆಗೆ ನಿನ್ನೆಯ ಘಟನೆಯ ಕುರಿತು ನ್ಯಾಯಮೂರ್ತಿಗಳಿಗೆ, ಸರ್ಕಾರಕ್ಕೆ, ಸಂಬಂಧಿಸಿದ ಸಚಿವರಿಗೆ ಪತ್ರ ಬರೆಯಲಾಗುವುದು ಎಂದು ದೇವದುರ್ಗ ಶಾಸಕ ಕೆ. ಶಿವನಗೌಡ ನಾಯಕ ಹೇಳಿದ್ದಾರೆ.

conflict
ನ್ಯಾಯಾಧೀಶರೊಂದಿಗೆ ಗಲಾಟೆ
author img

By

Published : Jan 27, 2022, 3:03 PM IST

Updated : Jan 27, 2022, 4:50 PM IST

ರಾಯಚೂರು: ಸಂವಿಧಾನ ಶಿಲ್ಪಿ ಡಾ. ಬಿ. ಆರ್.​ ಅಂಬೇಡ್ಕರ್​ ಫೋಟೋಗೆ ಅವಮಾನ ಮಾಡಿದ ಆರೋಪ ಎದುರಿಸುತ್ತಿರುವ ಜಿಲ್ಲಾ ನ್ಯಾಯಾಲಯದ ಸತ್ರ ನ್ಯಾಯಾಧೀಶರನ್ನು ನ್ಯಾಯಾಂಗ ಇಲಾಖೆಯಿಂದ ವಜಾಗೊಳಿಸಬೇಕೆಂದು ದೇವದುರ್ಗ ಶಾಸಕ ಕೆ. ಶಿವನಗೌಡ ನಾಯಕ ಒತ್ತಾಯಿಸಿದ್ದಾರೆ.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ವೇಳೆ ಡಾ. ಬಿ. ಆರ್. ಅಂಬೇಡ್ಕರ್ ಭಾವಚಿತ್ರ ಇಟ್ಟು ಧ್ವಜಾರೋಹಣ ನೇರವೇರಿಸುವ ವಿಚಾರವಾಗಿ ಜ.26 ರಂದು ನೀಡಿದ್ದಾರೆ ಎನ್ನಲಾದ ಹೇಳಿಕೆಯನ್ನು ಖಂಡಿಸಿ, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದ ಸಾಂವಿಧಾನಿಕ ಹುದ್ದೆಯಲ್ಲಿದ್ದು, ದೇಶಕ್ಕೆ ಸಂವಿಧಾನ ಕೊಟ್ಟಂತಹ ಡಾ. ಬಿ. ಆರ್. ಅಂಬೇಡ್ಕರ್ ಅವರ ಫೋಟೋ ಇಟ್ಟರೆ ಧ್ವಜಾರೋಹಣ ಮಾಡುವುದಿಲ್ಲ ಎನ್ನುವ ಅವರ ಹೇಳಿಕೆ ನೋವುಂಟು ಮಾಡಿದೆ ಎಂದರು.

ಜಿಲ್ಲಾ ಕೋರ್ಟ್​ನ ಸತ್ರ ನ್ಯಾಯಾಧೀಶರ ವಿರುದ್ಧ ಆಕ್ರೋಶ

ಇಂತಹ ಮನಸ್ಥಿತಿಯಲ್ಲಿರುವವರು ನ್ಯಾಯ ಒದಗಿಸುವ ಕೆಲಸ ಮಾಡುವುದಕ್ಕೆ ಆಗಲ್ಲ. ಹೀಗಾಗಿ, ಮಾನ್ಯ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಇವರನ್ನು ಸೇವೆಯಿಂದ ವಜಾಗೊಳಿಸಬೇಕು ಎನ್ನುವ ಒತ್ತಾಯ ಮಾಡುತ್ತೇವೆ. ಜತೆಗೆ ಈ ಕುರಿತು ಸರ್ಕಾರಕ್ಕೆ, ಸಂಬಂಧಿಸಿದ ಸಚಿವರಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.

ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಹಿನ್ನಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹೈಕೋರ್ಟ್​ ಮಾರ್ಗಸೂಚಿಯಂತೆ ಧ್ವಜಾರೋಹಣ ಮಾತ್ರ ಮಾಡಲು ಸೂಚಿಸಿದ್ದರಿಂದ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಅವರು ಡಾ. ಬಿ. ಆರ್. ಅಂಬೇಡ್ಕರ್ ಭಾವಚಿತ್ರವನ್ನು ತೆಗೆಯುವಂತೆ ಹೇಳಿದ್ದರು ಎಂಬ ಆರೋಪ ಕೇಳಿಬಂದಿದೆ.

ಶಾಸಕ ಕೆ. ಶಿವನಗೌಡ ನಾಯಕ ಮಾತನಾಡಿದರು

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಈ ವೇಳೆ ಅಲ್ಲಿಯೇ ಇದ್ದಂತಹ ನ್ಯಾಯವಾದಿಗಳು ಸರ್ಕಾರ ಡಾ. ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನ ಕಡ್ಡಾಯಗೊಳಿಸಿದೆ ಎಂದು ಆದೇಶ ನೀಡಿದೆ. ಆದರೆ, ನ್ಯಾಯಾಧೀಶರು ಭಾವಚಿತ್ರವನ್ನ ತೆಗೆಯುವಂತೆ ಹೇಳಿದ್ದಾರೆ ಎಂದು ವಿರೋಧ ವ್ಯಕ್ತವಾಗಿತ್ತು. ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು.

ನ್ಯಾಯಾಧೀಶರ ನಡೆಯನ್ನು ವಿರೋಧಿಸಿ ವಿವಿಧ ದಲಿತ ಸಂಘಟನೆಗಳು ಡಾ. ಬಿ. ಆರ್ ಅಂಬೇಡ್ಕರ್ ಅವರನ್ನು ಅಪಮಾನಗೊಳಿಸಿದ್ದಾರೆ ಎಂದು ಆರೋಪಿಸಿ ಬುಧವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ನಗರದ ಅಂಬೇಡ್ಕರ್ ಸರ್ಕಲ್, ಕೇಂದ್ರೀಯ ಬಸ್ ನಿಲ್ದಾಣ ಹಾಗು ನಗರದ ಹೊರವಲಯದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಓದಿ: ಸಿಎಂ ಭೇಟಿ ಮಾಡಿದ ಚಿಕ್ಕಮಗಳೂರು ಶಾಸಕರ ನಿಯೋಗ: ಬಜೆಟ್​ನಲ್ಲಿ ಅನುದಾನ ನೀಡುವಂತೆ ಮನವಿ

Last Updated : Jan 27, 2022, 4:50 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.