ರಾಯಚೂರು: ಕೆಲ ಹಿರಿಯ ನಾಯಕರು ನೀಡುತ್ತಿರುವ ಗೊಂದಲಕಾರಿ ಹೇಳಿಕೆಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ ಎಂದು ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಕೆಲ ಹಿರಿಯ ನಾಯಕರು ಗೊಂದಲ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದರಿಂದ ಬೇಸತ್ತು ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಆದರೆ ಈಗಾಗಲೇ ಪಕ್ಷದ ರಾಷ್ಟ್ರೀಯ ನಾಯಕರು, ಹೈಕಮಾಂಡ್ ಮತ್ತು ರಾಜ್ಯಾಧ್ಯಕ್ಷರು ಇನ್ನೂ ಎರಡು ವರ್ಷಗಳ ಕಾಲ ಬಿ.ಎಸ್.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ ಎಂದರು.
ಕೊರೊನಾ ಸಂಕಷ್ಟ ಸಮಯದಲ್ಲಿ ರಾಜ್ಯದ ಹಿತಕ್ಕಾಗಿ ಶ್ರಮವಹಿಸುತ್ತಿದ್ದಾರೆ. ಅದರಲ್ಲೂ ನಮ್ಮ ಜಿಲ್ಲೆಗೆ ಚುಚ್ಚುಮದ್ದುಗಳ ಬೇಡಿಕೆ ಸಲ್ಲಿಸಿದ್ದಾಗ ಕೂಡಲೇ ಸ್ಪಂದಿಸಿ ಚುಚ್ಚುಮದ್ದು ಪೂರೈಸಿದ್ದಾರೆ ಎಂದರು.