ರಾಯಚೂರು: ವಿಧಾನಪರಿಷತ್ ಸದಸ್ಯ ಬಸವರಾಜ ಪಾಟೀಲ್ ಇಟಗಿ ಪುತ್ರ ಸುಮನ್, ಕಾಂಗ್ರೆಸ್ ಯುವ ಅಧ್ಯಕ್ಷರ ಕೊಲೆಗೆ ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಈ ಕುರಿತು ದೂರು ದಾಖಲಾಗಿದೆ.
ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಬಳಿ ದೇವದುರ್ಗ ತಾಲೂಕಿನ ಕಾಂಗ್ರೆಸ್ ಯುವ ಅಧ್ಯಕ್ಷ ಶರಣಗೌಡ ಕಾರ್‌ಗೆ ಟಿಪ್ಪರ್‌ನಿಂದ ಡಿಕ್ಕಿ ಹೊಡೆಸಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಶರಣಗೌಡ ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ ಎಂಬ ಆರೋಪವಿದೆ. ಶರಣಗೌಡರ ಕಾರಿಗೆ ಡಿಕ್ಕಿ ಹೊಡೆದ ಟಿಪ್ಪರ್ ಸುಮನ್ ಕಡೆಯವರದ್ದು ಎಂದು ಹೇಳಲಾಗುತ್ತಿದೆ. ಮರಳು ತುಂಬಿಕೊಂಡು ಹೋಗುತ್ತಿರುವ ಟಿಪ್ಪರ್ಗಳು ರಾಯಲ್ಟಿ ನೀಡುತ್ತಿಲ್ಲ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಬಂದ ಸುಮನ್, ಶರಣಗೌಡರ ಮೇಲೆ ಹಲ್ಲೆ ಮಾಡಿದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.