ರಾಯಚೂರು: ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಮೇಲಿಂದ ಇಬ್ಬರು ಮಕ್ಕಳ ಜೊತೆ ತಾಯಿ ನೀರಿಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ದಢೇಸೂಗೂರು ಗ್ರಾಮದ ಬಳಿ ನಡೆದಿದೆ.
ಸಿರಗುಪ್ಪಾದ ಅಂಬಾ ನಗರ ನಿವಾಸಿ ಚೆನ್ನಮ್ಮ(35), ಸುಮಿತ್ರ(7), ಪ್ರಶಾಂತ(5) ಮೃತಪಟ್ಟವರು. ನಿನ್ನೆ ಸಂಜೆ ವೇಳೆ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಗೃಹಿಣಿಯಾಗಿರುವ ಚೆನ್ನಮ್ಮನ ಪತಿ ರವಿ ಕೋವಿಡ್‌ನಿಂದಾಗಿ ಇತ್ತೀಚೆಗೆ ಮೃತಪಟ್ಟಿದ್ದರು. ಇದರಿಂದ ನೊಂದ ಪತ್ನಿಯೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಸಿಂಧನೂರು ಗ್ರಾಮೀಣ ಠಾಣಾ ಪಿಎಸ್‌ಐ ಹಾಗೂ ಸಿಪಿಐ ಉಮೇಶ ಕಾಂಬ್ಳೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.