ರಾಯಚೂರು: ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಬೆಂಕಿ ಅವರ ಮಗಳಿಗೂ ತಗುಲಿದ ಪರಿಣಾಮ ಇಬ್ಬರೂ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ನಡೆದಿದೆ.
ಶಿರಿಷಾ (35), ಭುವನ (6) ಮೃತ ಅಮ್ಮ-ಮಗಳು. ಕಳೆದ 11 ವರ್ಷಗಳ ಹಿಂದೆ ಶಿವಪ್ರಸಾದ್ ಎನ್ನುವರ ಜೊತೆ ಶಿರಿಷಾ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಇತ್ತೀಚಿಗೆ ಯಾವುದೋ ವಿಷಯವನ್ನ ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಶಿರಿಷಾ ಬೆಂಕಿ ಹಚ್ಚಿಕೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ಮನೆಯೊಳಗಿದ್ದ 6 ವರ್ಷದ ಮಗಳು ಭುವನಗೂ ಬೆಂಕಿ ತಗುಲಿದ್ದು, ದುರಾದೃಷ್ಟವಶಾತ್ ಇಬ್ಬರೂ ಮೃತಪಟ್ಟಿದ್ದಾರೆ. ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜಾಹೀರಾತು- ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ