ರಾಯಚೂರು: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಬಿಡಲಾಗಿದೆ. ಇದರಿಂದ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.
ನಾರಾಯಣಪುರ ಜಲಾಶಯದಿಂದ 9 ಗಂಟೆಗೆ 1.40 ಲಕ್ಷ ಕ್ಯೂಸೆಕ್ ನೀರಿನ ಒಳಹರಿವು ಇದ್ದು, 1.38 ಲಕ್ಷ ಕ್ಯೂಸೆಕ್ ನೀರನ್ನು ಜಲಾಶಯದ ಗೇಟ್‌ಗಳ ಮೂಲಕ ನದಿಗೆ ಹರಿಬಿಡಲಾಗುತ್ತಿದೆ.
ಇದರಿಂದ ಜಿಲ್ಲೆಯ ಲಿಂಗಸೂಗೂರು, ದೇವದುರ್ಗ, ರಾಯಚೂರು ತಾಲೂಕಿನ ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ ಸೇತುವೆಗೆ ನೀರು ಸಮೀಸಿದೆ.
ನದಿಗೆ ಲಕ್ಷಾಂತರ ಕ್ಯೂಸೆಕ್ ನೀರು ಹರಿಬಿಟ್ಟಿರುವುದರಿಂದ ನದಿ ಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದು, ನದಿಗೆ ಅಳವಡಿಸಿರುವ ಪಂಪ್ಸೆಟ್ಗಳನ್ನು ತೆಗೆದುಕೊಳ್ಳುವಂತೆ ರೈತರಿಗೆ ಸೂಚಿಸಲಾಗಿದೆ. ನಿನ್ನೆ ಬೆಳಿಗ್ಗೆ ತಗ್ಗಿದ್ದ ಪ್ರವಾಹ ಇದೀಗ ಜಲಾಶಯದಲ್ಲಿ ಒಳಹರಿವು ಹೆಚ್ಚಾದ ಪರಿಣಾಮ ಜಿಲ್ಲೆಗೆ ಪ್ರವಾಹ ಭೀತಿ ಶುರುವಾಗಿದೆ.