ರಾಯಚೂರು: ಮಹತ್ವಾಕಾಂಕ್ಷಿ ಜಿಲ್ಲೆಗಳಾದ ರಾಯಚೂರು ಹಾಗೂ ಯಾದಗಿರಿ ಅಭಿವೃದ್ಧಿ ಹೊಂದಬೇಕು ಎಂದು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದ್ದಾರೆ.
ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ ರಾಯಚೂರು-ಯಾದಗಿರಿ ಮಹತ್ವಾಕಾಂಕ್ಷಿ ಜಿಲ್ಲೆಗಳ ಸುಸ್ಥಿರ ಅಭವೃದ್ಧಿ ಯೋಜನೆಯ ಕಾರ್ಯಾಗಾರದಲ್ಲಿ ಭಾಗವಹಿಸಿ ಸಚಿವರು ಮಾತನಾಡಿದ್ರು.
ಮಹತ್ವಾಕಾಂಕ್ಷಿ ಜಿಲ್ಲೆಗಳಾದ ರಾಯಚೂರು ಹಾಗು ಯಾದಗಿರಿ ಜಿಲ್ಲೆ ಅಭಿವೃದ್ಧಿಯಾಗಬೇಕು ಎಂದು ಪ್ರಧಾನಿ ಮೋದಿಯವರ ಸೂಚನೆ ನೀಡಿದ್ದು, ಅ ನಿಟ್ಟಿನಲ್ಲಿ ಅಭಿವೃದ್ದಿ ಕೆಲಸ ಹಮ್ಮಿಕೊಳ್ಳಲಾಗಿದ್ದು, ಅದನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ರು. ಅಭಿವೃದ್ಧಿ ಯೋಜನೆಯಲ್ಲಿ ಯಾರೂ ರಾಜಕಾರಣ ಮಾಡಬಾರದು. ಮುಂಬರುವ ಅಧಿವೇಶನದಲ್ಲಿ ಮಹತ್ವಾಕಾಂಕ್ಷಿ ಜಿಲ್ಲೆಗಳ ಅಭಿವೃದ್ಧಿ ಮೂರು ಜನ ಸಂಸದರು ನನ್ನೊಟ್ಟಿಗೆ ಬರಬೇಕು. ಈ ಜಿಲ್ಲೆಗಳಿಗೆ ಏನೆಲ್ಲಾ ಅಭಿವೃದ್ದಿ ಕೆಲಸವಾಗಬೇಕು ಆಯಾ ಸಂಬಂಧಿಸಿದ ಇಲಾಖೆ ಸಚಿವರೊಂದಿಗೆ ಚರ್ಚೆ ಮಾಡಿ, ಯೋಜನೆ ಅಭಿವೃದ್ದಿ ಕಾರ್ಯವನ್ನ ಮಾಡೋಣ. ಒಂದು ವೇಳೆ ಅಧಿವೇಶನ ನಡೆಯುವ ನನ್ನೊಟ್ಟಿಗೆ ಬಾರದೆ ಕೆಲಸವಾಗದಿದ್ರೆ ನನ್ನ ದೂಷಿಸಬಾರದು ಎಂದರು.
ಈ ಜಿಲ್ಲೆಗಳಿಗೆ ಆರೋಗ್ಯ, ಶಿಕ್ಷಣ, ಕೃಷಿ, ಉದ್ಯೋಗ ಅವಕಾಶಗಳು ಹಾಗೂ ಮೂಲಭೂತ ಸೌಕರ್ಯ ಸೇರಿದಂತೆ ಒಟ್ಟು ಐದು ಪ್ರಮುಖ ಅಂಶಗಳನ್ನ ಒಳಗೊಂಡ ವಿಚಾರವನ್ನ ಪ್ರಸ್ತಾವನೆಗೆ ಸಿದ್ಧತೆ ಮಾಡಿದ್ದು, ಅವುಗಳನ್ನ ಮಾಡುವಂತೆ ಪ್ರಾಮಾಣಿಕ ಕೆಲಸ ಮಾಡುವುದಾಗಿ ಭರವಸೆ ನೀಡಿದ್ರು.
ಕಾರ್ಯಕ್ರಮದಲ್ಲಿ ಸಂಸದರಾದ ರಾಜಾ ಅಮರೇಶ್ವರ ನಾಯಕ, ಕರಡಿ ಸಂಗಣ್ಣ, ಡಾ.ಉಮೇಶ ಜಾದವ್, ಶಾಸಕರಾದ ಡಾ.ಶಿವರಾಜ್ ಪಾಟೀಲ್, ಬಸವನಗೌಡ ದದ್ದಲ್, ವೆಂಟಕರಾವ್ ನಾಡಗೌಡ, ರಾಜಾ ವೆಂಕಟಪ್ಪ ನಾಯಕ, ರಾಜ್ಯ ಯೋಜನಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಉನ್ನತಮಟ್ಟದ ಅಧಿಕಾರಿಗಳು ಭಾಗವಹಿಸಿದ್ರು.