ETV Bharat / state

ಪರಿಹಾರ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸೂಚನೆ - ವಿಪತ್ತು ನಿರ್ವಹಣೆ

ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆ ಮತ್ತು ಕೋವಿಡ್ ಕುರಿತು ಅಧಿಕಾರಿಗಳ ಸಭೆ ನಡೆಸಲಾಯಿತು.

Meeting
Meeting
author img

By

Published : Oct 21, 2020, 1:41 PM IST

ರಾಯಚೂರು: ಕೃಷ್ಣಾ ಹಾಗೂ ಭೀಮಾ ನದಿಯ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಪ್ರಾರಂಭಿಸಲಾಗಿರುವ ಕಾಳಜಿ ಕೇಂದ್ರಗಳಲ್ಲಿ ಸ್ವಚ್ಛತೆ ಹಾಗೂ ಉತ್ತಮ ಆರೋಗ್ಯ ಸೇವೆ ಲಭ್ಯವಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆರ್. ವಿಶಾಲ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆ ಮತ್ತು ಕೋವಿಡ್ ಕುರಿತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೃಷ್ಣಾ ಹಾಗೂ ಭೀಮಾ ನದಿಯ ಪ್ರವಾಹದಿಂದ ತಾಲೂಕಿನ 17 ಗ್ರಾಮಗಳು ಪೀಡಿತವಾಗಿದ್ದು, ಕೆಲ ಗ್ರಾಮಗಳನ್ನು ಸ್ಥಳಾಂತರಿಸಿ ಜಿಲ್ಲಾಡಳಿತ ಪರಿಹಾರ ಕೇಂದ್ರಗಳನ್ನು ಪ್ರಾಂಭಿಸಿದೆ. ಈ ಕೇಂದ್ರಗಳಲ್ಲಿ ಸ್ವಚ್ಛತೆ ಹಾಗೂ ಉತ್ತಮ ಆರೋಗ್ಯ ಸೇವೆ ದೊರೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಮಳೆ ಹಾಗೂ ಪ್ರವಾಹದಿಂದ ಬೆಳೆ ಹಾನಿ, ಮನೆ, ರಸ್ತೆ ಇತರೆ ಹಾನಿಗಳ ಕುರಿತು ಸರ್ವೇ ನಡೆಸಿ ವರದಿ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಕಳೆದ ಒಂದು ವಾರದಿಂದ ಇಳಿಮುಖವಾಗುತ್ತಿದ್ದು, ಇಲ್ಲಿಯವರೆಗೂ 1.45 ಲಕ್ಷ ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 12 ಸಾವಿರ ಪ್ರಕರಣಗಳು ದಾಖಲಾಗಿದ್ದು, 459 ಸಕ್ರಿಯ ಪ್ರಕರಣಗಳಿವೆ. ಪ್ರತಿದಿನ 1500 ಜನರ ರ‍್ಯಾಪಿಡ್ ಟೆಸ್ಟ್ ಮಾಡಲಾಗುತ್ತಿದೆ. ಜಿಲ್ಲೆಯ ಜನಸಂಖ್ಯೆ ಅನುಸಾರ ಪ್ರತಿನಿತ್ಯ ಸುಮಾರು 5000 ರ‍್ಯಾಪಿಡ್ ಟೆಸ್ಟ್ ಅಗಬೇಕು. ಆದ್ದರಿಂದ ಅಧಿಕಾರಿಗಳು ಜಾಗೃತರಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಮಾತನಾಡಿ, ಕೃಷ್ಣಾ ನದಿಯಲ್ಲಿ ಪ್ರವಾಹ ಇಳಿಮುಖವಾಗುತ್ತಿದ್ದು, ಭೀಮಾ ನದಿಯಲ್ಲಿ 4 ಲಕ್ಷ ಕ್ಯೂಸೆಕ್ ನೀರು ಹರಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಕೆಲ ಕ್ರಮಗಳನ್ನು ಕೈಗೊಂಡಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.