ETV Bharat / state

ರಾಯಚೂರು: ಹೋಮ್ ಕ್ವಾರಂಟೈನ್​ನಲ್ಲಿದ್ದ ವಯೋವೃದ್ಧ ಸಾವು - Raichur corona death news

ರಾಯಚೂರು ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಮತ್ತೊಂದು ಬಲಿ ಪಡೆದಿದೆ. 78 ವರ್ಷದ ವೃದ್ಧ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

Raichur
ರಾಯಚೂರು
author img

By

Published : Jul 19, 2020, 10:50 AM IST

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಗ್ರಾಮದಲ್ಲಿ ಹೋಂ ಕ್ವಾರಂಟೈನ್​ನಲ್ಲಿದ್ದ 78 ವರ್ಷದ ವಯೋವೃದ್ಧ ಶನಿವಾರ ಮೃತಪಟ್ಟಿದ್ದಾರೆ.

ಮೃತರ ಮಗ ತಾಲೂಕಿನ ಮುದಗಲ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದು, ಕೋವಿಡ್ ದೃಢಪಟ್ಟಿದ್ದರಿಂದ ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು.

ಹೋಮ್ ಕ್ವಾರಂಟೈನ್​ನಲ್ಲಿ 2 ತಿಂಗಳ ಮಗುವಿನ ಜೊತೆ ಬಾಣಂತಿ, ಮಗ ಮತ್ತು ವಯೋವೃದ್ಧ ಇದ್ದರು. ಮಧುಮೇಹ, ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧನಿಗೆ ಕೋವಿಡ್ ಇರುವುದರ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಭೇಟಿ ನೀಡಿದ್ದ ಆರೋಗ್ಯಾಧಿಕಾರಿ, ಪೊಲೀಸ್ ಅಧಿಕಾರಿಗಳು ಕೋವಿಡ್ ನಿಯಮ ಪಾಲಿಸಿ ಅಂತ್ಯಕ್ರಿಯೆ ನಡೆಸಲು ಸೂಚಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.