ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕು ದೇವರಭೂಪುರದಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದ ವೃದ್ಧ ಮೃತಪಟ್ಟಿದ್ದು, ಗ್ರಾಮಸ್ಥರಲ್ಲಿ ಭೀತಿ ಹೆಚ್ಚಿಸಿದೆ.
ಮೃತ ಮಲ್ಲಪ್ಪ ಕಾಳಪ್ಪ ಗುರುಗುಂಟ (65) ಎರಡು ದಿನದ ಹಿಂದೆ ವಾಂತಿ ಭೇದಿಯಿಂದ ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.

ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಸಂಜೆ ಆಸ್ಪತ್ರೆಯಲ್ಲಿಯೆ ಮೃತಪಟ್ಟಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.