ETV Bharat / state

ಲಿಂಗಸುಗೂರ ತಾಲೂಕಿನ ಹುಲಿಗುಡ್ಡದಲ್ಲಿ ಮತ್ತೊಂದು ಕೋವಿಡ್ ಪ್ರಕರಣ! - Lingasuguru corona latest news

ರಾಯಚೂರು ಜಿಲ್ಲೆಯ ಲಿಂಗಸುಗೂರ ತಾಲೂಕಿನ ಹುಲಿಗುಡ್ಡದಲ್ಲಿ ಮತ್ತೊಂದು ಕೊರೊನಾ ಕೇಸ್ ಪತ್ತೆಯಾಗಿದೆ.

Lingasugura
Lingasugura
author img

By

Published : Jun 27, 2020, 10:35 PM IST

ಲಿಂಗಸುಗೂರ(ರಾಯಚೂರು): ತಾಲೂಕಿನ ಹುಲಿಗುಡ್ಡದಲ್ಲಿ ಮತ್ತೊಂದು ಕೋವಿಡ್ ಪ್ರಕರಣ ವರದಿಯಾಗಿದೆ ಎಂದು ಬಳ್ಳಾರಿ ವಿಮ್ಸ್ ಆಸ್ಪತ್ರೆ ಮೂಲಗಳು ದೃಢಪಡಿಸಿವೆ.

ತಾಲೂಕಿನ ಕರಡಕಲ್ಲ ಗ್ರಾಮದ 58 ವರ್ಷದ ವ್ಯಕ್ತಿ ಬೇರೆ ರೋಗಕ್ಕೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲು ದ್ರವವನ್ನು ಪರೀಕ್ಷೆ ನಡೆಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಕೋವಿಡ್ ವಾರ್ಡ್​ಗೆ ದಾಖಲಿಸಲಾಗಿದೆ.

ವ್ಯಕ್ತಿಗೆ ಯಾವ ಮೂಲದಿಂದ ಸೋಂಕು ಹರಡಿದೆ ಎಂಬುದು ತಾಲೂಕು ಆಡಳಿತಕ್ಕೆ ಸವಾಲಾಗಿ ಪರಿಣಮಿಸಿದ್ದು, ಟ್ರಾವೆಲ್ ಹಿಸ್ಟರಿ ಸಂಗ್ರಹ ಕಾರ್ಯ ನಡೆಸಿದ ನಂತರವೇ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ.

ಸೋಂಕಿತ ವ್ಯಕ್ತಿ ಪ್ರಾಥಮಿಕ ಸಂಪರ್ಕ ಹೊಂದಿದವರು ಎಂದು ಗುರುತಿಸಿ ಹೋಂ ಕ್ವಾರಂಟೈನ್​​ನಲ್ಲಿರಲು ಪೊಲೀಸರು ಸೂಚಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.