ರಾಯಚೂರು : ಜಿಲ್ಲೆಯಲ್ಲಿ ಇಂದು ಕೇವಲ ಒಂದು ಕೊರೊನಾ ಸೋಂಕಿತ ಪತ್ತೆಯಾಗಿದ್ದಾರೆ. ಇದರಿಂದಾಗಿ ಸೋಂಕಿತರ ಸಂಖ್ಯೆ 410ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಲಿಂಗಸುಗೂರು ತಾಲೂಕಿನ 75 ವರ್ಷದ ವ್ಯಕ್ತಿಗೆ ಸೋಂಕು ಪತ್ತೆಯಾಗಿದೆ. ಸೋಂಕಿತನ ಕುರಿತು ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ ಕಾರಣ ಸೋಂಕು ಹೇಗೆ ತಗುಲಿತು ಎನ್ನುವುದನ್ನು ಪತ್ತೆ ಹಚ್ಚಲಾಗುತ್ತಿದೆ.
ಪ್ರಯೋಗಾಲಯದಿಂದ 496 ಜನರ ವರದಿ ಬರಬೇಕಾಗಿದೆ. ಸದ್ಯ ಸ್ಥಳೀಯ ಓಪೆಕ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ 199 ಜನರು ಹಾಗೂ ಯರಮರಸ್‌ನ ಐಸೋಲೇಷನ್ ವಾರ್ಡ್‌ನಲ್ಲಿ 69 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೂ ಗುಣಮುಖರಾಗಿರುವ 137 ಸೋಂಕಿತರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ 271 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.