ರಾಯಚೂರು : ಜಿಲ್ಲೆಯ ಲಿಂಗಸುಗೂರು ತಾಲೂಕಿನ ಫೂಲಭಾವಿಯಲ್ಲಿ ಮತ್ತೊಂದು ಕೋವಿಡ್-19 ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಬೆಂಗಳೂರು ಬಿಎಂಟಿಸಿಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಇತ್ತೀಚೆಗೆ ತನ್ನ ಸ್ವಗ್ರಾಮವಾದ ಫೂಲಭಾವಿ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು ಪಾಸಿಟಿವ್ ವರದಿ ಬಂದ ಹಿನ್ನೆಲೆ, ಅವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಚಾಲಕನಿಗೆ ಕೋವಿಡ್ ಸೋಂಕು ಬೆಂಗಳೂರು ಮೂಲದಿಂದ ಬಂದಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಟ್ರಾವೆಲ್ ಹಿಸ್ಟರಿ ಸಂಗ್ರಹ ಕಾರ್ಯ ನಡೆಸಿದ ನಂತರವೇ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ. ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನು ಹೋಂ ಕ್ವಾರಂಟೈನ್ನಲ್ಲಿರಲು ಸೂಚಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.