ರಾಯಚೂರು: ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ತುಪ್ಪದೂರು ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯ ಸಿರವಾರ ತಾಲೂಕಿನ ತುಪ್ಪದೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಶರಬಣ್ಣ(38) ಮೃತ ವ್ಯಕ್ತಿಯೆಂದು ಗುರುತಿಸಲಾಗಿದೆ. ಜಾನುವಾರುಗಳಿಗೆ ಮೇವು ತರಲು ಸಂಜೆ 4.30 ಸುಮಾರಿಗೆ ಹೊಲಕ್ಕೆ ತೆರಳಿದ್ದ ವೇಳೆ ಸಿಡಿಲು ಬಡಿದು ಈತ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. ಸಿರವಾರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.