ರಾಯಚೂರು: ಕೊರೊನಾ ನಿಯಂತ್ರಿಸುವ ಸಲುವಾಗಿ ಒಂದು ವಾರ ಲಾಕ್‌ಡೌನ್ ಮಾಡಲಾಗಿದ್ದು, ಜಿಟಿಜಿಟಿ ಮಳೆಯ ನಡುವೆಯೇ ನಗರದಲ್ಲಿ ಅನವಶ್ಯಕ ಓಡಾಡುತ್ತಿರುವ ಕಾರುಗಳನ್ನು ಪಶ್ಚಿಮ ಠಾಣೆ ಪೊಲೀಸರು ವಶಕ್ಕೆ ಪಡೆದು ಅವುಗಳ ಮಾಲೀಕರಿಗೆ ದಂಡ ವಿಧಿಸುತ್ತಿದ್ದಾರೆ.
![Inspection by police](https://etvbharatimages.akamaized.net/etvbharat/prod-images/kn-rcr-04-lockdown-car-fine-vis-7202440_15072020125239_1507f_00924_251.jpg)
ಪಿಎಸ್‌ಐ ದಾದಾವಲಿ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಸಂಚರಿಸುತ್ತಿರುವ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಸಿಂಧನೂರು ನಗರದಲ್ಲೂ ಲಾಕ್‌ಡೌನ್ ಜಾರಿಯಾಗಿದ್ದು, ಬೇಕಾಬಿಟ್ಟಿ ಓಡಾಡುತ್ತಿರುವ ವಾಹನ ಸವಾರರಿಗೆ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಲಾಗುತ್ತಿದೆ. ಈ ಎರಡೂ ನಗರಗಳಲ್ಲಿ ತರಕಾರಿ, ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲವನ್ನೂ ಬಂದ್ ಮಾಡಲಾಗಿದೆ.