ರಾಯಚೂರು/ಧಾರವಾಡ:ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ಕರವೇ ಕಾರ್ಯಕರ್ತರ ನಡೆಸಿರುವ ಹಲ್ಲೆ ಖಂಡಿಸಿ, ಇಂದು ರಾಜ್ಯಾದ್ಯಂತ ಕರೆ ನೀಡಿರುವ ಓಪಿಡಿ ಬಂದ್ ರಾಯಚೂರು ಜಿಲ್ಲೆಯ ಬೆಂಬಲ ವ್ಯಕ್ತವಾಗಿದೆ.
ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ಬಂದ್ ಗೆ ನಗರದಲ್ಲಿನ ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ಚಿಕಿತ್ಸೆಯ ಸೇವೆ ಸ್ಥಗಿತಗೊಳಿಸುವ ಮೂಲಕ ಮಿಂಟೋ ಆಸ್ಪತ್ರೆ ವೈದ್ಯರ ಪ್ರತಿಭಟನೆ ಬೆಂಬಲ ಸೂಚಿಸಿದ್ದಾರೆ.ಇದರಿಂದ ಜಿಲ್ಲೆಯ ನಾನಾ ಭಾಗಗಳಿಂದ ಚಿಕಿತ್ಸೆಗೆಂದು ಬರುವ ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಕೇವಲ ತುರ್ತು ಚಿಕಿತ್ಸೆಗೆ ಮಾತ್ರ ಸೇವೆಗೆ ಅವಕಾಶ ಕಲ್ಪಿಸಲಾಗಿದ್ದು, ಓಪಿಡಿಯನ್ನ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.
ಧಾರವಾಡದಲ್ಲಿ ಬಹುತೇಕ ಖಾಸಗಿ ಆಸ್ಪತ್ರೆಗಳು ಬಂದ್:
ಮಿಂಟೋ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ ಪ್ರಕರಣ ವಿರೋಧಿಸಿ ಧಾರವಾಡದಲ್ಲಿ ಬಹುತೇಕ ಖಾಸಗಿ ಆಸ್ಪತ್ರೆಗಳು ಬಂದ್ ಆಗಿವೆ.
ಧಾರವಾಡ ಜಿಲ್ಲೆಯಲ್ಲಿ ಐಎಂಎದಿಂದ ಬಂದ್ ಗೆ ಕರೆ ನೀಡಿದ ಪರಿಣಾಮವಾಗಿ ಬಹುತೇಕ ಆಸ್ಪತ್ರೆಗಳು ಇಂದು ಬೆಳಿಗ್ಗೆಯಿಂದಲೇ ಬಂದ್ ಆಗಿವೆ.ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಧಾರವಾಡದ ಖಾಸಗಿ ವೈದ್ಯರು ಬಂದ್ ಗೆ ಕರೆ ನೀಡಿದ್ದಾರೆ. ತುರ್ತು ಚಿಕಿತ್ಸೆ ಹೊರತು ಪಡಿಸಿ ಬೇರೆ ಯಾವ ಚಿಕಿತ್ಸೆಗಳು ಆಸ್ಪತ್ರೆಯಲ್ಲಿ ಸಿಗುತ್ತಿಲ್ಲ ಇದರಿಂದ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.