ರಾಯಚೂರು: ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ, ನಗರ ಸಂಚಾರ ಪೊಲೀಸ್ ಠಾಣೆ ಹಾಗೂ ನಗರದ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸಂಚಾರ ನಿಯಂತ್ರಣ ಸ್ವಯಂ ಸೇವಕರ ತರಬೇತಿ ಶಿಬಿರ ನಡೆಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಚಾರಿ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಇಲ್ಲದೇ ಹೋದಲ್ಲಿ ದಂಡಕ್ಕೆ ಗುರಿಯಾಗಬೇಕಾಗುತ್ತದೆ. ವಾಹನ ಚಾಲಕರು ಸಂಚಾರಿ ನಿಯಮಗಳನ್ನು ಪಾಲಿಸುವುದರ ಜೊತೆಗೆ ಇಲಾಖೆಗೆ ಸಹಕರಿಸಬೇಕು. ಇದರಿಂದ ಸುಸ್ಥಿರ ಸಮಾಜ ನಿರ್ಮಾಣ ಸಾಧ್ಯ ಎಂದರು.
ಈ ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡು ತರಬೇತಿ ಪಡೆದರು.