ರಾಯಚೂರು: ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಇಂದು ನಗರದ ಪೋತಗಲ್ ಗ್ರಾಮದಲ್ಲಿ ಅಯ್ಯಾಳಪ್ಪ ತಾತಾ (ಮೈಲಾರಲಿಂಗೇಶ್ವರ) ಪಲ್ಲಕ್ಕಿ ಮಹೋತ್ಸವ ನಡೆಯಿತು.
ಮಹೋತ್ಸವದ ಅಂಗವಾಗಿ ಎತ್ತುಗಳಿಂದ ಭಾರವಾದ ಕಲ್ಲು ಎಳೆಯುವ ಸ್ಪರ್ಧೆ ನಡೆಯಿತು. ಶಾಸಕ ಡಾ.ಶಿವರಾಜ್ ಪಾಟೀಲ್ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಜಿಲ್ಲೆಯ ವಿವಿಧ ಗ್ರಾಮಗಳಿಂದ ಭಾಗವಹಿಸಿದ ಎತ್ತುಗಳಿಗೆ ಜನರು ಶಿಳ್ಳೆ-ಕೇಕೆ ಹಾಕಿ ಪ್ರೋತ್ಸಾಹಿಸಿದರು. ನೂರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ರು.