ETV Bharat / state

12 ನಾಮಪತ್ರಗಳು ಕ್ರಮಬದ್ಧ ; ಜಿಲ್ಲಾ ಚುನಾವಣಾಧಿಕಾರಿ ಡಾ.ಅವಿನಾಶ್

ವಿಧಾನ ಪರಿಷತ್‌ ರಾಯಚೂರು ಹಾಗೂ ಕೊಪ್ಪಳ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸಲ್ಲಿಕೆಯಾಗಿದ್ದ ಎಲ್ಲಾ ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾದ್ದು, ಸ್ವೀಕೃತಗೊಂಡಿವೆ..

parishad candidates nomination application accepted
12 ನಾಮಪತ್ರಗಳು ಕ್ರಮಬದ್ಧ
author img

By

Published : Nov 24, 2021, 5:21 PM IST

ರಾಯಚೂರು : ವಿಧಾನ ಪರಿಷತ್‌ ರಾಯಚೂರು ಹಾಗೂ ಕೊಪ್ಪಳ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಒಟ್ಟು 5 ಮಂದಿ ಅಭ್ಯರ್ಥಿಗಳು 12 ನಾಮಪತ್ರ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಪರಿಶೀಲನೆ ನಡೆಸಲಾಯಿತು.

ಸಲ್ಲಿಕೆಯಾದ 12 ನಾಮಪತ್ರಗಳೂ ಕ್ರಮಬದ್ಧವಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಅವಿನಾಶ್ ರಾಜೇಂದ್ರ ಮೆನನ್ ಅವರು ತಿಳಿಸಿದರು.

ಸಲ್ಲಿಕೆಯಾಗಿದ್ದ ಒಟ್ಟು 12 ನಾಮಪತ್ರಗಳಲ್ಲಿ 5 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. ಅದರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶರಣಗೌಡ ಪಾಟೀಲ್ ಬಯ್ಯಾಪೂರ 4 ನಾಮಪತ್ರ, ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ವಿಶ್ವನಾಥ ಬನಹಟ್ಟಿ 4 ನಾಮಪತ್ರ, ಜನಹಿತ ಪಾರ್ಟಿ ಅಭ್ಯರ್ಥಿ ತಿರುಪತಿ ತಂದೆ ನರಸಪ್ಪ ಅವರಿಂದ 2 ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿಗಳಾಗಿ ದೊಡ್ಡ ಬಸನಗೌಡ ಪಾಟೀಲ್ 1 ನಾಮಪತ್ರ ಹಾಗೂ ನರೇಂದ್ರ ಆರ‍್ಯ ಅವರಿಂದ 1 ನಾಮಪತ್ರ ಸರಿಯಾಗಿದ್ದು, ಸ್ವೀಕೃತಗೊಂಡಿವೆ.

ನಾಮಪತ್ರ ಹಿಂಪಡೆಯಲು ನ.26 ಕೊನೆಯ ದಿನವಾಗಿದೆ. ಆ ದಿನ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ವಾಪಸ್‌ ಪಡೆಯಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.